A woman who went missing with her two children at night was found dead in a well in the morning! ರಾತ್ರಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಬೆಳಿಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆ

ರಾತ್ರಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ, ಬೆಳಿಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆ!

ಹೊಸನಗರ (hosanagara), ಆ. 9: ಮನೆಯಿಂದ ಕಣ್ಮರೆಯಾಗಿದ್ದ (missing) ಮಹಿಳೆ ಹಾಗೂ ಇಬ್ಬರು ಮಕ್ಕಳು, ಮನೆಯೊಂದರ ಸಮೀಪದ ಬಾವಿಯಲ್ಲಿ (well) ಶವವಾಗಿ ಪತ್ತೆಯಾದ ಘಟನೆ, ಶಿವಮೊಗ್ಗ (shimoga) ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಕೈ ಸಮೀಪದ ಚಂಪಾಪುರ ಗ್ರಾಮದಲ್ಲಿ ನಡೆದಿದೆ.

ರಾಜೇಶ್ ಎಂಬುವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತಪಟ್ಟವರೆಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಮಹಿಳೆಯು ಇಬ್ಬರು ಮಕ್ಕಳೊಂದಿಗೆ ಮನೆಯಿಂದ (house) ಹೊರಹೋಗಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ. ಕುಟುಂಬದವರು ಎಲ್ಲೆಡೆ ಹುಡುಕಿದರೂ ಸುಳಿವು ಲಭ್ಯವಾಗಿರಲಿಲ್ಲ.

ಶುಕ್ರವಾರ ಬೆಳಿಗ್ಗೆ ನೆರೆಮನೆಯ ಸಮೀಪದ ಬಾವಿಯಲ್ಲಿ ತಾಯಿ ಹಾಗೂ ಮಕ್ಕಳ (mother and two childrens) ಶವಗಳು ತೇಲುತ್ತಿರುವುದು ಕಂಡುಬಂದಿದೆ. ಮೃತದೇಹಗಳನ್ನು (dead bodies) ಬಾವಿಯಿಂದ ಮೇಲಕ್ಕೇತ್ತಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಶಂಕೆ (Suspect suicide) ವ್ಯಕ್ತಪಡಿಸಲಾಗಿದೆ. ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆ (ngara police station) ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Plastic national flag sale ban! ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧ! Previous post ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧ!
A woman died of rabies as a result of being bitten by a cat! ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು! Next post ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!