ಶಿವಮೊಗ್ಗ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಗುಂಡು!

Shimoga : A rowdy sheeter who tried to attack the police was shot in the leg! ಶಿವಮೊಗ್ಗ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಗುಂಡು!

ಶಿವಮೊಗ್ಗ (shivamogga), ಆ. 12: ಬಂಧಿಸಲು ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲೆತ್ನಿಸಿದ ರೌಡಿ ಶೀಟರ್ (rowdy sheeter) ಓರ್ವನ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಆ. 12 ರ ಸೋಮವಾರ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಭವಿತ್ (26) ಬಂಧಿತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ವಿನೋಬನಗರ ಠಾಣೆ (vinobanagar police station) ಸಬ್ ಇನ್ಸ್’ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ (shimoga sp) ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.  

ಭವಿತ್ ವಿರುದ್ದ ಕೊಲೆ, ದರೋಡೆ, ಕೊಲೆ ಯತ್ನ ಸೇರಿದಂತೆ ಏಳು ಪ್ರಕರಣಗಳು (criminal cases) ದಾಖಲಾಗಿದ್ದವು. ಜಿಲ್ಲೆಯಿಂದ ಈತನನ್ನು ಗಡಿಪಾರುಗೊಳಿಸಲಾಗಿತ್ತು. ಶಿವಮೊಗ್ಗಕ್ಕೆ ಆರೋಪಿ ವಾಪಾಸ್ ಆಗಿದ್ದ.

ಭಾನುವಾರ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (jayanagara police station) ಅಮಾಯಕ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ಗಲಾಟೆ ಮಾಡಿದ್ದ. ಕೊಲೆಗೆ ಯತ್ನಿಸಿದ್ದ. ಆರೋಪಿ ಬಂಧನಕ್ಕೆ ಪಿಎಸ್ಐ ಸುನೀಲ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಲಾಗಿತ್ತು ಎಂದು ಎಸ್ಪಿ ತಿಳಿಸಿದ್ದಾರೆ.

ಸುನೀಲ್  ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ, ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದ (accused tried to attack the police personnel). ದಾಳಿಯಿಂದ ಸಿಬ್ಬಂದಿ ಶ್ರೀಕಾಂತ್ ಎಂಬುವರು ಗಾಯಗೊಂಡಿದ್ದಾರೆ. ತಕ್ಷಣವೇ ಆತ್ಮ ರಕ್ಷಣೆ ಉದ್ದೇಶದಿಂದ ಸಬ್ ಇನ್ಸ್’ಪೆಕ್ಟರ್ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ (the accused was shot in the leg and arrested). ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →