ಶಿವಮೊಗ್ಗ – ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು : ನಿಗೂಢವಾದ ಪ್ರಕರಣ!

Shimoga - Three of the same family committed suicide: a mysterious case! ಶಿವಮೊಗ್ಗ - ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು : ನಿಗೂಢವಾದ ಪ್ರಕರಣ!

ಶಿವಮೊಗ್ಗ (shivamogga), ಆ. 13: ಒಂದೇ ಕುಟುಂಬದ ಮೂವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿಯೇ ಆತ್ಮಹತ್ಯೆಗೆ (suicide) ಶರಣಾದ ಘಟನೆ, ಶಿವಮೊಗ್ಗ ನಗರದ ಓ.ಟಿ. ರಸ್ತೆಯ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.

ಭುವನೇಶ್ವರಿ (41), ಇವರ ಮಗ ದರ್ಶನ್ (21) ಹಾಗೂ ಸಹೋದರ ಮಾರುತಿ (37) ಆತ್ಮಹತ್ಯೆಗೆ ಶರಣಾದವರೆಂದು ಗುರುತಿಸಲಾಗಿದೆ. ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ (committed suicide by consuming poison) ಶಂಕೆ ವ್ಯಕ್ತಪಡಿಸಲಾಗಿದೆ.

ಈ ಮೊದಲು ಇವರು ನಗರದ ಪಂಚವಟಿ ಕಾಲೋನಿಯಲ್ಲಿ ನೆಲೆಸಿದ್ದರು. ತದನಂತರ ಓ.ಟಿ. ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇವರು ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಕಾರಣವೇನು? ಎಂಬುವುದು ತಿಳಿದುಬಂದಿಲ್ಲ. ಮಂಗಳವಾರ ಇವರ ಸಂಬಂಧಿಯೋರ್ವರು ಮನೆಯ ಬಳಿ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ದೊಡ್ಡಪೇಟೆ ಠಾಣೆ ಪೊಲೀಸರು (doddapete police station) ಘಟನಾ ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ಧಾರೆ. ಪೊಲೀಸರ ತನಿಖೆಯ ನಂತರಷ್ಟೆ ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →