ಸ್ವಾತಂತ್ರ್ಯ ವೀರರು – ಯೋಧರಿಗೆ ನಮನಗಳು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ

Tributes to Freedom Heroes: District In-charge Minister S Madhu Bangarappa ಸ್ವಾತಂತ್ರ್ಯ ವೀರರು - ಯೋಧರಿಗೆ ನಮನಗಳು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ (shivamogga), ಆ.15 : ನಮ್ಮ ಭಾರತ ದೇಶವನ್ನು ವಿದೇಶಿಯರಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಭಾರತೀಯರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ (freedom fight) ಸಕ್ರಿಯರಾಗಿದ್ದರು. ಆ ಎಲ್ಲಾ ಸ್ವಾತಂತ್ರ್ಯ ವೀರರಿಗೆ ಅನಂತ ನಮನಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ (madhu bangarappa_ ಹೇಳಿದರು.

ಇಂದು ನಗರದ ಡಿ.ಎ.ಆರ್ ಮೈದಾನದಲ್ಲಿ (dar ground) ಆಯೋಜಿಸಿದ್ದ 78 ನೇ ಸ್ವತಂತ್ರ ದಿನಾಚರಣೆಯಲ್ಲಿ (78 independence day) ಧ್ವಜಾರೋಹಣ (hoisting the flag) ನೆರವೇರಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ (mahatma gandhi), ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಸುಭಾಶ್‌ಚಂದ್ರ ಬೋಸ್, ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಈ ನೆಲದ ಅನೇಕ ಹೋರಾಟಗಾರರ ಪರಿಶ್ರಮದ ಫಲ ಇಂದಿನ ಸ್ವಾತಂತ್ರ್ಯ ದಿನಾಚರಣೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಐವರು ವೀರಸೇನಾನಿಗಳು ನೇಣಿಗೆ ಶರಣಾಗಿ ಹುತಾತ್ಮರಾಗಿದ್ದು ನಿಜಕ್ಕೂ ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ. ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಪೂಜ್ಯ ತಂದೆಯವರಾದ ಎಸ್.ಬಂಗಾರಪ್ಪನವರು ಸೇರಿದಂತೆ ನಾಲ್ಕು ಜನ ಮುಖ್ಯಮಂತ್ರಿಗಳನ್ನು ನೀಡಿದ್ದು, ಅನೇಕ ಕ್ಷೇತ್ರಗಳಲ್ಲಿನ ಅಸಂಖ್ಯಾತ ಪ್ರತಿಭಾವಂತರು, ಪ್ರಸಿದ್ದರು, ಉದಯಿಸಿದ ಪುಣ್ಯಭೂಮಿ ಶಿವಮೊಗ್ಗ ಜಿಲ್ಲೆ ಎಂದರು.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು, ರೈತರಲ್ಲಿ ಮಂದಹಾಸ ಮೂಡಿದೆ. ಭಾರೀ ಮಳೆಯಿಂದಾಗಿ ಜನ-ಜಾನುವಾರುಗಳು, ಮನೆಗಳು ಹಾನಿಗೊಳಗಾಗಿವೆ. ಹಾನಿಗೊಳಗಾಗಿರುವ ಮನೆಗಳ ಮಾಲೀಕರಿಗೆ ತಕ್ಷಣದ ಪರಿಹಾರ ಕ್ರಮವಾಗಿ ಅಗತ್ಯ ನೆರವನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಹಾನಿಗೊಳಗಾದ 294 ಶಾಲೆಗಳು, ಅಂಗನವಾಡಿಗಳು, ಇತರೆ ಕಟ್ಟಡಗಳು, ರಸ್ತೆ, ಸೇತುವೆಗಳ ದುರಸ್ತಿಗೂ ಅಗತ್ಯ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 41 ಕೆ.ಪಿ.ಎಸ್ ಶಾಲೆಗಳನ್ನು ಆರಂಭಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಅಲ್ಲದೇ 2023-24ನೇ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂ ಮತ್ತು ಸಾಕ್ಸ್ಗಳನ್ನು ಪೂರೈಸಲಾಗಿದೆ. ಈಗಾಗಲೇ 12000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 2015 ರಿಂದ 2020 ನೇ ಸಾಲಿನ ವರೆಗೆ ಅನುದಾನಿತ ಶಾಲಾ ಕಾಲೇಜುಗಳಲ್ಲಿ 5 ಸಾವಿರ ಶಿಕ್ಷರ ನೇಮಕಾತಿ ಅನುಮತಿ ನೀಡಲಾಗಿದೆ. ಖಾಲಿ ಇರುವ 10 ಸಾವಿರ ಖಾಯಂ ಶಿಕ್ಷರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.

ಮಕ್ಕಳಲ್ಲಿನ ಪೌಷ್ಠಿಕತೆಯನ್ನು ಹೆಚ್ಚಿಸಲು ವಾರದ ಮೂರು ದಿನ ಹಾಲಿನೊಂದಿಗೆ ರಾಗಿಮಾಲ್ಟ್ ಹಾಗೂ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಪ್ರತಿದಿನ ಬಿಸಿಯೂಟ, ಮೊಟ್ಟೆ, ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲಾಗುತ್ತಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಸಹಯೋಗದೊಂದಿಗೆ ಮುಂದಿನ 3 ವರ್ಷಗಳ ಅವಧಿಗೆ ವಾರದ 6 ದಿನಗಳು ಮೊಟ್ಟೆ ವಿತರಿಸುವ ಯೋಜನೆ ಪ್ರಾರಂಭಿಸಲಾಗಿದೆ. 10 ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದೆ ಸರಿಯದಂತೆ ಹಾಗೂ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯಕವಾಗುವಂತೆ ಮೂರು ಹಂತದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಅಭಿಪ್ರಾಯ ಮೂಡಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ,  ಶಾಸರಾದ ಚನ್ನಬಸಪ್ಪ, ಆರಗ ಜ್ಣಾನೇಂದ್ರ, ಶಾರದಾ ಪೂರ್ಯಾನಾಯ್ಕ, ಬಲ್ಕೀಶ್ ಭಾನು, ಧನಂಜಯ ಸರ್ಜಿ, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಸಿಇಓ ಎನ್.ಹೇಮಂತ್ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →