shimoga | ಶಿವಮೊಗ್ಗ – ಬೊಮ್ಮನಕಟ್ಟೆಯಲ್ಲಿ ಗದ್ದೆಗಳಿಗೆ ನುಗ್ಗಿದ ಕೆರೆ ನೀರು!

Lake water entered the fields in Shimoga's Bommanakatte! ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಗದ್ದೆಗಳಿಗೆ ನುಗ್ಗಿದ ಕೆರೆ ನೀರು!

ಶಿವಮೊಗ್ಗ (shivamogga), ಆ. 19: ಭಾರೀ ಮಳೆಗೆ (heavy rainfall), ಶಿವಮೊಗ್ಗ ನಗರದ ಬೊಮ್ಮನಕಟ್ಟೆ (bommannakatte) ದೇವಾಲಯ ಸಮೀಪದ ಕೆರೆಯ ತೂಬು ಹಾಗೂ ಪೈಪ್ ಒಡೆದು, ತಗ್ಗು ಪ್ರದೇಶದಲ್ಲಿರುವ ಕೃಷಿ ಜಮೀನುಗಳಿಗೆ ಕೆರೆ ನೀರು ನುಗ್ಗಿದ ಘಟನೆ ಆ. 19 ರ ಸೋಮವಾರ ಬೆಳಿಗ್ಗೆ ನಡೆದಿದೆ.

ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಮಳೆಗೆ (rain) ಕೆರೆ ಸಂಪೂರ್ಣ ಭರ್ತಿಯಾಗಿತ್ತು. ಈ ನಡುವೆ ಸೋಮವಾರ ಮುಂಜಾನೆ ಬಿದ್ದ ಮಳೆಗೆ ಕೆರೆಗೆ ಅಪಾರ ಪ್ರಮಾಣದ ನೀರು (rain water) ಬಂದಿದೆ. ಇದರಿಂದ ಕೆರೆ ಅಭಿವೃದ್ದಿ ಕಾಮಗಾರಿ ವೇಳೆ ಹಾಕಲಾಗಿದ್ದ ಪೈಪ್ ಮತ್ತು ತೂಬು ಕಿತ್ತು ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೆರೆಯಿಂದ (lake) ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ತಗ್ಗು ಪ್ರದೇಶದಲ್ಲಿನ (low lying areas) ಭತ್ತದ ಗದ್ದೆಗಳಿಗೆ (paddy field) ನುಗ್ಗಿದೆ. ಇತ್ತೀಚೆಗಷ್ಟೆ ನಾಟಿ ಮಾಡಿದ್ದ ಸಸಿಗಳು ಕೊಚ್ಚಿ ಹೋಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಗ್ರಾಮಸ್ಥರೇ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ಸದರಿ ಕೆರೆಯು ಜಿಲ್ಲಾ ಪಂಚಾಯ್ತಿ (zilla panchayat) ಆಡಳಿತದ ಅಧೀನದಲ್ಲಿದೆ. ತಕ್ಷಣವೇ ಕೆರೆ ಅವ್ಯವಸ್ಥೆ ಸರಿಪಡಿಸಲು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →