rain alert | ಭಾರೀ ಮಳೆ ಮುಂದುವರಿಕೆ ಮುನ್ಸೂಚನೆ!

shimoga rain | Shivamogga: The first rain of the year tempered by the sun! shimoga rain | ಶಿವಮೊಗ್ಗ: ಬಿಸಿಲಿಗೆ ತಂಪೆರೆದ ವರ್ಷದ ಮೊದಲ ಮಳೆ!

ಬೆಂಗಳೂರು / ಶಿವಮೊಗ್ಗ, ಆ. 22: ಪ್ರಸ್ತುತ ರಾಜ್ಯದ ವಿವಿಧೆಡೆ ಮುಂಗಾರು ಮಳೆ (monsoon rain) ಆರ್ಭಟ ಜೋರಾಗಿದೆ. ಈ ನಡುವೆ ಇನ್ನೂ ಒಂದು ವಾರಗಳ ಕಾಲ  ಹಲವು ಜಿಲ್ಲೆಗಳಲ್ಲಿ, ಭಾರೀ ಮಳೆ (heavy rainfall) ಮುಂದುವರಿಯುವ ಮುನ್ಸೂಚನೆಯನ್ನು, ಹವಾಮಾನ ಇಲಾಖೆ (meteorological department) ನೀಡಿದೆ.

ಕರಾವಳಿ ಭಾಗಗಳಲ್ಲಿ ಶುಕ್ರವಾರದಿಂದ ಮಳೆ (rain) ಚುರುಕುಗೊಳ್ಳುವ ಸಾಧ್ಯತೆಯಿದೆ. ಈ ನಡುವೆ ಆ. 24 ರಿಂದ ಆ. 28 ರವರೆಗೆ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹಾಗೆಯೇ ಮುಂದಿನ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ (shimoga) ಜಿಲ್ಲೆಯಲ್ಲಿಯೂ ವ್ಯಾಪಕ ಮಳೆ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸೇರಿದಂತೆ ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ,

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಮುನ್ಸೂಚನೆಯನ್ನು ನೀಡಲಾಗಿದೆ. 6 ರಿಂದ 11 ಸೆಂಟಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →