thirthahalli | ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ : ಶಿಕ್ಷಕ ಅರೆಸ್ಟ್!

Sexual assault of a student in a residential school: Teacher arrested! ತೀರ್ಥಹಳ್ಳಿ - ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ : ಶಿಕ್ಷಕ ಅರೆಸ್ಟ್!

ತೀರ್ಥಹಳ್ಳಿ (thirthahalli), ಆ. 22: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ (sexually harassment) ಎಸಗಿದ ಆರೋಪದ ಮೇರೆಗೆ, ವಸತಿ ಶಾಲೆ ಶಿಕ್ಷಕನೋರ್ವನನ್ನು (teacher) ತೀರ್ಥಹಳ್ಳಿ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಆರೋಪಿ ಶಿಕ್ಷಕ 45 ವರ್ಷದವನಾಗಿದ್ದು, ತೀರ್ಥಹಳ್ಳಿ ತಾಲೂಕಿನ ವಸತಿ ಶಾಲೆಯಲ್ಲಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಹಾಗೂ ಕೆಲ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಆರೋಪ ಕೇಳಿಬಂದಿತ್ತು.

ಈ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲರು, ಚೈಲ್ಡ್ ಹೆಲ್ಪ್ ಲೈನ್ ಹಾಗೂ ಪೊಲೀಸರಿಗೆ (police) ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ (thirthahalli police station) ಪೋಕ್ಸೋ ಕಾಯ್ದೆ (posco act) ಯಡಿ ಎಫ್.ಐ.ಆರ್. ದಾಖಲಾಗಿತ್ತು.

ಬೆಂಗಳೂರಿನಲ್ಲಿದ್ದ (bengaluru) ಶಿಕ್ಷಕನನ್ನು ತೀರ್ಥಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →