bhadravati | ಭದ್ರಾವತಿ – ಸೈಬರ್ ವಂಚನೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ!

bhadravati | ಭದ್ರಾವತಿ - ಸೈಬರ್ ವಂಚನೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ! bhadravati | Bhadravati - committed suicide due to cyber fraud!

ಭದ್ರಾವತಿ (bhadravati), ಆ. 24: ಸೈಬರ್ ವಂಚಕರ (cyber fraudsters) ಸುಳ್ಳು ಸಂದೇಶ ನಂಬಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದ ಯುವಕನೋರ್ವ, ಮನನೊಂದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (hanging suicide) ಶರಣಾದ ಘಟನೆ, ಭದ್ರಾವತಿ ನಗರದ ಪೇಪರ್ ಟೌನ್ ಬಡಾವಣೆಯಲ್ಲಿ ನಡೆದಿದೆ.

ಪ್ರದೀಪ್ (27) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಇವರು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.

ಪ್ರದೀಪ್ ಅವರು ಟೆಲಿಗ್ರಾಂ ಆಪ್ (telegram app) ನಲ್ಲಿ ಬಂದ ಉದ್ಯೋಗಕ್ಕೆ ಸಂಬಂಧಿಸಿದ ಸೈಬರ್ ವಂಚಕರ ಸುಳ್ಳು ಸಂದೇಶ ನಂಬಿ, ಸುಮಾರು 70 ಸಾವಿರಕ್ಕೂ ಅಧಿಕ ಹಣ ಸಾಲ ಮಾಡಿ ಹೂಡಿಕೆ ಮಾಡಿದ್ದರು. ಆದರೆ ತದನಂತರ ವಂಚನೆಗೊಳಗಾಗಿರುವುದು ಅವರಿಗೆ ಗೊತ್ತಾಗಿದೆ.

ಇದರಿಂದ ಮನನೊಂದ ಪ್ರದೀಪ್ ಅವರು ಆ.23 ರ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ (paper town police station) ಪ್ರಕರಣ ದಾಖಲಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →