shimoga | ಭಾರೀ ಮಳೆ ಸಾಧ್ಯತೆ : ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್!

Rainfall has decreased in Malnad: Linganamakki Dam still 8 feet away from filling! ಮಲೆನಾಡಲ್ಲಿ ತಗ್ಗಿದ ಮಳೆ : ಲಿಂಗನಮಕ್ಕಿ ಡ್ಯಾಂ ಭರ್ತಿಗೆ 8 ಅಡಿ ಬಾಕಿ!

ಶಿವಮೊಗ್ಗ (shivamogga), ಆ. 25: ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ, ಮುಂಗಾರು ಮಳೆಯ (monsoon rain) ತೀವ್ರತೆ ಆಗಸ್ಟ್ ತಿಂಗಳಲ್ಲಿ ಕಡಿಮೆಯಾಗಿತ್ತು. ಈ ನಡುವೆ ಇತ್ತೀಚೆಗೆ ಮತ್ತೆ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿತ್ತು. ಹಲವೆಡೆ ಭಾರೀ ಮಳೆಯಾಗಿತ್ತು (heavy rainfall).

ಶನಿವಾರ ಶಿವಮೊಗ್ಗ ತಾಲೂಕು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ (rain). ಈ ನಡುವೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (meteorological department) ನೀಡಿದೆ.

12 ರಿಂದ 20 ಸೆಂಟಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ (orange alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಂಕಷ್ಟ : ಪ್ರಸ್ತುತ ವರ್ಷ ಭಾರೀ ಮಳೆಯಿಂದ ಮೆಕ್ಕೆಜೋಳ (maize) ಬೆಳೆಗಾರರು ಸಂಕಷ್ಟ ಸಿಲುಕುವಂತಾಗಿದೆ. ಹಲವೆಡೆ ಮೆಕ್ಕೆಜೋಳ ಬೆಳೆ (maize crop) ಹಾಳಾಗಿದೆ. ಮತ್ತೊಂದೆಡೆ, ಮಳೆ ಮುಂದುವರಿದಿರುವುದರಿಂದ ಅಳಿದುಳಿದ ಬೆಳೆಯು ಕೂಡ ಮಳೆ ಸಿಲುಕಿ ಹಾಳಾಗುತ್ತಿದೆ ಎಂದು ಬೆಳೆಗಾರರು ಅಳಲು ತೋಡಿಕೊಳ್ಳುತ್ತಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →