actor darshan case | ನಟ ದರ್ಶನ್ ಬೇರೆ ಜೈಲಿಗೆ ಸ್ಥಳಾಂತರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Actor Darshan transferred to another jail: What did CM Siddaramaiah say? ನಟ ದರ್ಶನ್ ಬೇರೆ ಜೈಲಿಗೆ ಸ್ಥಳಾಂತರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

ಬೆಳಗಾವಿ (belagavi), ಆ. 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿ (parappana agrahara jail) ನಲ್ಲಿರುವ ನಟ ದರ್ಶನ್‌ (actor darshan) ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರು ತಿಳಿಸಿದರು.

ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ (Darshan) ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು (suspended) ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವ (home minister) ರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ದರ್ಶನ (darshan) ಬೇರೆ ಜೈಲಿಗೆ (jail) ಸ್ಥಳಾಂತರ ಮಾಡಬೇಕಾ ಬೇಡವೇ ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಪರ ಇರುವುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡುವ ಕುರಿತು ಶಾಸಕರ ಜತೆ ಮಾತುಕತೆ ನಡೆಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →