ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 165 ಮಿಲಿ ಮೀಟರ್ ಮಳೆ!

Highest 165 mm rain in Mastikatt! ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 165 ಮಿಲಿ ಮೀಟರ್ ಮಳೆ! #ಭದ್ರಾ ಡ್ಯಾಂ, #ಲಿಂಗನಮಕ್ಕಿಡ್ಯಾಂ, # bhadra dam linganamakki dam #ತುಂಗಾಡ್ಯಾಂ, #ಮಳೆ, #ಜಲಾಶಯ, #ಅಣೆಕಟ್ಟು, #ತುಂಗಭದ್ರಾಡ್ಯಾಂ

ಶಿವಮೊಗ್ಗ (shivamogga), ಆ. 26: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ (monsoon rain) ಚುರುಕುಗೊಂಡಿದೆ. ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶ (western ghat) ವ್ಯಾಪ್ತಿಗಳಲ್ಲಿ ಅಬ್ಬರ ಜೋರಾಗಿದ್ದು, ಧಾರಾಕಾರ ಮಳೆಯಾಗುತ್ತಿದೆ.

ಆ. 26 ರ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ (mastikatte) ಯಲ್ಲಿ ಅತ್ಯಧಿಕ 165 ಮಿಲಿ ಮೀಟರ್ (ಮಿ.ಮೀ.) ಮಳೆಯಾಗಿದೆ (rainfall).

ಉಳಿದಂತೆ ಮಾಣಿ (mani) ಯಲ್ಲಿ 41 ಮಿ.ಮೀ., ಯಡೂರಿ (yadur) ನಲ್ಲಿ 68 ಮಿ.ಮೀ., ಹುಲಿಕಲ್ (hulikall) 134 ಮಿ.ಮೀ., ಸಾವೇಹಕ್ಲು (savehakklu) ವಿನಲ್ಲಿ 119 ಮಿ.ಮೀ. ಭರ್ಜರಿ ವರ್ಷಧಾರೆಯಾಗಿದೆ (heavyrainfall).

ಡ್ಯಾಂ ವಿವರ : ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ (linganamakki dam) ನ ನೀರಿನ ಮಟ್ಟ 1817. 25 (ಗರಿಷ್ಠ ಮಟ್ಟ : 1819) ಅಡಿಯಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ, ಡ್ಯಾಂ ಒಳಹರಿವು (inflow) 20,967 ಕ್ಯೂಸೆಕ್ ಗೆ ಏರಿಕೆಯಾಗಿದೆ. 7054 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯ (bhadra dam) ದ ನೀರಿನ ಮಟ್ಟ 180. 7 (ಗರಿಷ್ಠ ಮಟ್ಟ : 186) ಅಡಿಯಿದೆ. 5614 ಕ್ಯೂಸೆಕ್ ಒಳಹರಿವಿದ್ದು, ಜಲಾಶಯದಿಂದ ಹೊರ ಬಿಡುತ್ತಿರುವ (out flow) ನೀರಿನ್ನು ಸ್ಥಗಿತಗೊಳಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →