shimoga | ಶಿವಮೊಗ್ಗದಲ್ಲಿ ಅಪರಿಚಿತ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಪೊಲೀಸರ ಮನವಿ

shimoga | Unidentified woman dies in Shimoga: Police appeals to help trace the heirs ಶಿವಮೊಗ್ಗದಲ್ಲಿ ಅಪರಿಚಿತ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಶಿವಮೊಗ್ಗ (shivamogga), ಆ. 27: ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ (ksrtc bus stand) ದ ಶೌಚಾಲಯದ ಬಳಿ, ಅಪರಿಚಿತ ಮಹಿಳೆಯೋರ್ವರ ಶವ (unknown female dead body) ಪತ್ತೆಯಾದ ಘಟನೆ ನಡೆದಿದೆ.

ಆ. 24 ರಂದು ಸುಸ್ತಾಗಿ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದ ಮಹಿಳೆಯನ್ನು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆ (govt meggan hospital) ಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಆದರೆ ಮೃತ ಮಹಿಳೆಯ ಹೆಸರು, ವಿಳಾಸ ಸೇರಿದಂತೆ ಯಾವುದೇ ವಿವರಗಳು ಲಭ್ಯವಾಗಿಲ್ಲ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಹರೆ : ಮೃತ ಮಹಿಳೆಗೆ ಸರಿಸುಮಾರು 65 ರಿಂದ 70 ವರ್ಷ ವಯೋಮಾನವಿದೆ. 5 ಅಡಿ 01 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡನೆಯ ಮುಖ, ದೃಢವಾದ ಮೈಕಟ್ಟು ಹೊಂದಿದ್ದಾರೆ. ತಲೆಯಲ್ಲಿ ಸುಮಾರು 8 ಇಂಚು ಉದ್ದದ ಬಿಳಿ ಕೂದಲು, ಹಣೆ ಮಧ್ಯ ಭಾಗದಲ್ಲಿ ಕಪ್ಪು ಹಚ್ಚೆ ಇರುತ್ತದೆ,

ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ (doddapete police station), ದೂ. ಸಂ: 08182-261414, 9916882544 ನ್ನು ಸಂಪರ್ಕಿಸಬಹುದೆಂದು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →