shimoga rain | ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಕೆ ಮುನ್ಸೂಚನೆ!
ಶಿವಮೊಗ್ಗ (shivamogga), ಆ. 28: ಶಿವಮೊಗ್ಗ ಜಿಲ್ಲೆಯಲ್ಲಿ, ಕಳೆದ ಕೆಲ ದಿನಗಳಿಂದ ಮುಂಗಾರು ಮಳೆ (monsoon rain) ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯ (western ghat) ಪ್ರದೇಶಗಳಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಈ ನಡುವೆ ಮುಂದಿನ ಕೆಲ ದಿನಗಳವರೆಗೆ ಮಳೆ ಮುಂದುವರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಭಾರೀ ಮಳೆಯಾಗುವ (heavy rainfall) ಸಾಧ್ಯತೆಯಿದೆ. 12 ರಿಂದ 20 ಸೆಂಟಿ ಮೀಟರ್ ವರೆಗೂ ವರ್ಷಧಾರೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮಳೆ ವಿವರ : ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಹೊಸನಗರ (hosanagara) ತಾಲೂಕಿನ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ.
ಮಾಣಿ (mani) 48 ಮಿಲಿ ಮೀಟರ್, ಯಡೂರು (yadur) 40 ಮಿ.ಮೀ., ಹುಲಿಕಲ್ (hulikallu) 121ಮಿ.ಮೀ., ಮಾಸ್ತಿಕಟ್ಟೆ (masthikatte) ಯಲ್ಲಿ 105 ಮಿ.ಮೀ., ಚಕ್ರಾ (chakra) 65 ಮಿ.ಮೀ., ಸಾವೇಹಕ್ಲು (savehakklu) ವಿನಲ್ಲಿ 61 ಮಿ.ಮೀ. ಮಳೆಯಾಗಿದೆ (rain).
ಡ್ಯಾಂ ವಿವರ: ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಅಣೆಕಟ್ಟು (linganamakki reservoir) ನೀರಿನ ಮಟ್ಟ 1817. 12 (ಗರಿಷ್ಠ ಮಟ್ಟ : 1819) ಅಡಿಯಿದೆ. 39,896 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಭದ್ರಾ ಜಲಾಶಯ (bhadr dam) ದ ನೀರಿನ ಮಟ್ಟ 181. 2 (ಗರಿಷ್ಠ ಮಟ್ಟ : 186) ಅಡಿಯಿದೆ. 8571 ಕ್ಯೂಸೆಕ್ ಒಳಹರಿವಿದ್ದು (inflow), 3942 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (outflow).
