
bengaluru | ಸಿಎಂ ವಿರುದ್ದ ಪ್ರಾಸಿಕ್ಯೂಷನ್, ಡಿಸಿಎಂ ವಿರುದ್ದ ಸಿಬಿಐ ತನಿಖೆ ಪ್ರಕರಣ : ಹೈಕೋರ್ಟ್ ನತ್ತ ಎಲ್ಲರ ಚಿತ್ತ!
ಬೆಂಗಳೂರು (bangaluru), ಆ. 29: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (muda case) ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದುಪಡಿಸುವಂತೆ ಕೋರಿ, ಸಿಎಂ ಸಿದ್ದರಾಮಯ್ಯ (cm siddaramaiah) ಸಲ್ಲಿಸಿರುವ ಅರ್ಜಿಯ ವಿಚಾರಣೆ ಆ. 29 ರ ಗುರುವಾರ ಹೈಕೋರ್ಟ್ (high court) ನಲ್ಲಿ ವಿಚಾರಣೆಗೆ ಬರಲಿದೆ. ಇದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪ್ರಕರಣದ ವಿಚಾರಣೆ ನಡೆಸುತ್ತಿದೆ. ಪ್ರಾಸಿಕ್ಯೂಷನ್ (prosecution) ಗೆ ಅನುಮತಿ ನೀಡಿರುವ ರಾಜ್ಯಪಾಲರ (governor of karnataka) ಕ್ರಮ ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆ. 19 ರಂದು ನಡೆದಿತ್ತು.
ಈ ವೇಳೆ ನ್ಯಾಯಪೀಠವವು ಆ. 29 ರವರೆಗೆ ಆತುರದ ಕ್ರಮ ಜರುಗಿಸಬಾರದು ಎಂದು ಅಧೀನ ನ್ಯಾಯಾಲಯಗಳು ಹಾಗೂ ಲೋಕಾಯುಕ್ತಕ್ಕೆ ಸೂಚನೆ ನೀಡಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ದದ ಪ್ರಾಸಿಕ್ಯೂಷನ್ ಪ್ರಕರಣವು ರಾಷ್ಟ್ರ – ರಾಜ್ಯ ರಾಜಕೀಯ ವಲಯದ ಗಮನ ಸೆಳೆದಿದೆ. ಈ ಕಾರಣದಿಂದ ಹೈಕೋರ್ಟ್’ನಲ್ಲಿ ಪ್ರಕರಣದ ವಿಚಾರಣೆ ಏನಾಗಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ಪ್ರಕರಣ
ಬೆಂಗಳೂರು (bangaluru), ಆ. 29: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (dcm d k shivakumar) ಅವರ ವಿರುದ್ಧದ, ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು, ಸಿಬಿಐ (cbi) ಗೆ ನೀಡಿದ್ದನ್ನು ರದ್ದುಪಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಯ ತೀರ್ಪು (judgement) ಆ. 29 ರ ಗುರುವಾರ ಪ್ರಕಟವಾಗಲಿದೆ
ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಂಸ್ಥೆ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal) ಅವರು ಹೈಕೋರ್ಟ್ ನಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈಗಾಗಲೇ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಆ. 29 ರ ಸಂಜೆ 4. 30 ಕ್ಕೆ ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 2022 ರ ಸೆ. 25 ರಂದು ಡಿ.ಕೆ.ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ಅಂದಿನ ಬಿಜೆಪಿ ಸರ್ಕಾರ (bjp govt) ಆದೇಶಿಸಿತ್ತು. ಈ ಆದೇಶ ರದ್ದತಿ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು, 2023 ಏ.20 ರಂದು ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿತ್ತು.
ಇದರ ವಿರುದ್ದ ಡಿ.ಕೆ.ಶಿವಕುಮಾರ್ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಆದೇಶ ಹಾಗೂ ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. ಈ ನಡುವೆ ಹಾಲಿ ಕಾಂಗ್ರೆಸ್ ಸರ್ಕಾರ (congress govt), ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು ಲೋಕಾಯುಕ್ತಕ್ಕೆ ವಹಿಸುವ ನಿರ್ಧಾರ ಕೈಗೊಂಡಿತ್ತು.
ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹಾಗೂ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಆ. 12 ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ವಿಭಾಗೀಯ ಪೀಠ, ತೀರ್ಪು ಕಾಯ್ದಿರಿಸಿತ್ತು.