hubballi | ‘ಬಿಜೆಪಿ ಆಪರೇಷನ್ ಕಮಲ : ಕಾಂಗ್ರೆಸ್ ಶಾಸಕರು ದುಡ್ಡಿನ ಆಸೆಗೆ ಬಲಿಯಾಗಲ್ಲ’ – ಸಿಎಂ ಸಿದ್ದರಾಮಯ್ಯ

BJP's Operation Kamala : Congress MLAs will not fall prey to the desire for money - CM Siddaramaiah ‘ಬಿಜೆಪಿ ಆಪರೇಷನ್ ಕಮಲ : ಕಾಂಗ್ರೆಸ್ ಶಾಸಕರು ದುಡ್ಡಿನ ಆಸೆಗೆ ಬಲಿಯಾಗಲ್ಲ’ - ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ (hubballi), ಆ. 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ  ಶಾಸಕರು (congress mla) ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣ ((hubballi aiport) ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ (bjp) ಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ (operation lotus) ಮಾಡಿ, ಹಿಂಬಾಗಿಲಿನಿಂದ  2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ,ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರ (congress govt) ವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದು ತಿಳಿಸಿದರು.  

ಅಸ್ಥಿರಗೊಳಿಸುವ  ಪ್ರಯತ್ನ : ಸಿದ್ದರಾಮಯ್ಯs (siddaramaiha) ನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್s (jds) ಪಕ್ಷಗಳೆರಡೂ ಸೇರಿ , ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯಪಾಲರಿಗೆ ಒತ್ತಾಯ : ಮುಡಾ ಪ್ರಕರಣ (muda case) ದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (vijayendra bjp) ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ.

ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲ (governor) ರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (h d kumaraswamy), ಶಶಿಕಲಾ ಜೊಲ್ಲೆ,ಜನಾರ್ಧನ ರೆಡ್ಡಿ ನಿರಾಣಿ ಮೇಲಿನ  ಪ್ರಾಸಿಕ್ಯೂಷನ್ (prosecution) ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದು ತಿಳಿಸಿದರು.

ಮಹಾದಾಯಿ ಯೋಜನೆ : ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ.ಆದರೆ ಕೇಂದ್ರದಿಂದ ಪರಿಸರ  ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಹಣಕಾಸು ಆಯೋಗ : ನಿನ್ನೆ 16 ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು,  ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. 

ಆಯೋಗ ಶಿಫಾರಸ್ಸು ಮಾಡಿದ್ದ 11495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ  ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು  ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ನಟ ದರ್ಶನ್ ಪ್ರಕರಣ : ನಟ ದರ್ಶನ್ (actor darshan case) ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ನಿಟ್ಟಿನಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಉಳಿದ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳಿಸಲಾಗಿದ್ದು, ಇಂತಹ ತಪ್ಪು ನಡೆದ ಜೈಲಿನ ಡಿಜಿಪಿಗೆ ನೋಟೀಸನ್ನೂ ನೀಡಲಾಗಿದೆ ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →