ಭದ್ರಾವತಿ, ಮಾ. 5: ಭದ್ರಾವತಿ ನಗರದ ರೋಟರಿ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ, ನ್ಯೂ ಟೌನ್ ಠಾಣೆಯ ಪೊಲೀಸರು ರಕ್ತದಾನ ಮಾಡಿದರು.

ಶಿವಮೊಗ್ಗ ನಗರದ ಆಶಾ ಜ್ಯೋತಿ ಸ್ವಯಂಪ್ರೇರಿತ ರಕ್ತದಾನ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಸದರಿ ಶಿಬಿರದಲ್ಲಿ ನ್ಯೂಟೌನ್ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ರಂಗನಾಥ್ ಅವರ ನೇತೃತ್ವದಲ್ಲಿ ಸುಮಾರು 27 ಜನರು ರಕ್ತದಾನ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

