anywhere registration of property system from Sep 2 ಸೆ. 2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ : ಏನೀದು ಹೊಸ ವ್ಯವಸ್ಥೆ?

shimoga | ಸೆ. 2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ : ಏನೀದು ಹೊಸ ವ್ಯವಸ್ಥೆ?

ಶಿವಮೊಗ್ಗ (shivamogga), ಆ.29 : ಎಲ್ಲ ತಾಲ್ಲೂಕುಗಳಲ್ಲಿ ಸೆಪ್ಟೆಂಬರ್ 02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು (anywhere registration of property system) ಜಾರಿಗೆ ತರಲಾಗುತ್ತಿದೆ. ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಬಹುದಾಗಿದ್ದು ಸಾರ್ವಜನಿಕರು ಈ ನೂತನ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

2024-25ನೇ ಸಾಲಿನ ಆಯವ್ಯಯ (udget 2024 announcements) ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರ ಘೋಷಿಸಿತ್ತು. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 20211 ರಲ್ಲಿ, ತುಮಕುರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ 2024 ರ ಮಾರ್ಚ್ ನಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗಿತ್ತು.  

ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಶಿವಮೊಗ್ಗ ಜಿಲ್ಲೆಯ ಉಪ ನೋಂದಣಿ ಕಚೇರಿ (shimoga district sub registration office) ಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ (immovable property) ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿದೆ. ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಉದಾಹರಣೆಗೆ ಶಿವಮೊಗ್ಗ ತಾಲ್ಲೂಕು/ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಭದ್ರಾವತಿ, ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ಅಥವಾ ಶಿಕಾರಿಪುರ ತಾಲ್ಲೂಕುಗಳ ಯಾವುದೇ ಉಪ ನೋಂದಣಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.

ನೋಂದಣಿ ಪ್ರಕ್ತಿಯೆ ಸುಲಭವಾಗುವುದಲ್ಲದೆ ಸಮಯವೂ ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ, ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ಅವರು ತಿಳಿಸಿದ್ದಾರೆ.

thirthahalli | College student suspected of jumping into Tunga river : Search by fire brigade ತೀರ್ಥಹಳ್ಳಿ ತುಂಗಾ ನದಿಗೆ ಕಾಲೇಜು ವಿದ್ಯಾರ್ಥಿ ಹಾರಿದ ಶಂಕೆ : ಅಗ್ನಿಶಾಮಕ ದಳದಿಂದ ಶೋಧ Previous post thirthahalli | ತುಂಗಾ ನದಿಗೆ ಕಾಲೇಜು ವಿದ್ಯಾರ್ಥಿ ಹಾರಿದ ಶಂಕೆ : ಅಗ್ನಿಶಾಮಕ ದಳದಿಂದ ಶೋಧ
shimoga | An anonymous person died at Shimoga KSRTC bus station! ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಸಾವು! Next post shimoga | ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಸಾವು!