bengaluru | ಬೆಂಗಳೂರು – ‘ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ದುಷ್ಟ ಶಕ್ತಿಗಳ ಮೆಟ್ಟಿ ನಿಲ್ಲೋಣ’ : ಸಿಎಂ

Bengaluru - 'Let's stand on the feet of the evil forces that give an ax to democracy': CM ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ದುಷ್ಟ ಶಕ್ತಿಗಳ ಮೆಟ್ಟಿ ನಿಲ್ಲೋಣ : ಸಿಎಂ

ಬೆಂಗಳೂರು (bengaluru) ಸೆ. 5: ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ (cm siddaramaiah) ನುಡಿದರು. 

ಸೆ.15 ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ.  ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ  ಎಂದು ಸಿಎಂ ಅಭಿಪ್ರಾಯಪಟ್ಟರು. 

ಬೀದರ್ ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ , ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ ಎಂದು ಕರೆ ನೀಡಿದರು.

ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆ ಸಾಧ್ಯ ಎಂದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಕ್ಫ್ ಸಚಿವ ರಹಮಾನ್ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ 200 ಕ್ಕೂ ಹೆಚ್ಚು ಸ್ವಯಂ ಸೇವಾ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಸಭೆಯಲ್ಲಿ ತೊಡಗಿಸಿಕೊಂಡಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →