
shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ಶಿವಮೊಗ್ಗ (shivamogga), ಸೆ. 06 : ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರ (grama one center) ಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ (online application) ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ (state govt dept) ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ (grama panchayat) ಮಟ್ಟದಲ್ಲಿ ಗ್ರಾಮ ಒನ್ (grama one) ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ (seva sindhu portal) ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ (shimoga dist) ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದುದಿಲ್ಲ.
ಸಾಗರ (sagar) ತಾಲ್ಲೂಕಿನ ತಲವಾಟ 01, ಎಸ್.ಎಸ್ ಭೋಗ್ 01, ಉಳ್ಳೂರು 01, ತೀರ್ಥಹಳ್ಳಿ (thirthahalli) ತಾಲ್ಲೂಕಿನ ಹಾರೊಗೊಳಿಗೆ 01, ಅರಳಸುರಳಿ 01, ಬಸವಾನಿ 01, ಹೆದ್ದೂರು 01 ಖಾಲಿ ಇದ್ದು ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ (shimoga dc) ಗುರುದತ್ತ ಹೆಗಡೆ ತಿಳಿಸಿದ್ದಾರೆ.