bengaluru | Harassment of micro finance dealers in rural areas: What did the CM say? bengaluru | ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆಕೋರರ ಕಿರುಕುಳ : ಸಿಎಂ ಹೇಳಿದ್ದೇನು?

bengaluru | ಬೆಂಗಳೂರು | ‘ಸಿಎಂ ಹುದ್ದೆ ಖಾಲಿಯಿಲ್ಲ : ನಾನೇ ಮುಂದುವರೆಯುತ್ತೆನೆ’ : ಸಿದ್ದರಾಮಯ್ಯ

ಬೆಂಗಳೂರು (bengaluru), ಸೆ. 11: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ತಿಳಿಸಿದರು.

ಅವರು ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ (bjp government) ದ ಅವಧಿಯಲ್ಲಿನ ಹಗರಣಗಳ (scams) ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ  ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (dr g parameshwar) ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.

ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ.

ಅದರಲ್ಲಿ ಕೋವಿಡ್ 19 (covid scam) ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಕ್ರಮ ಖಂಡಿತ : ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ (bjp) ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎಸ್ ಐಟಿ ಕ್ರಮಕ್ಕೆ ಸೂಚನೆ : ಪಿಎಸ್ ಐ (psi) ಪರೀಕ್ಷಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡ (sit) ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ (charge sheet) ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ (court) ತೀರ್ಮಾನ ಕೈಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಖಾಲಿಯಿಲ್ಲ : ಮುಖ್ಯಮಂತ್ರಿ ಸ್ಥಾನ (cm post) ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

Hosnagar - Police attack on Adde who was making a gun in the shed of the ginger field! ಹೊಸನಗರ – ಶುಂಠಿ ಹೊಲದ ಶೆಡ್ ನಲ್ಲಿ ನಾಡ ಬಂದೂಕು ತಯಾರಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ! Previous post hosanagara | ಹೊಸನಗರ – ಶುಂಠಿ ಹೊಲದ ಶೆಡ್ ನಲ್ಲಿ ನಾಡ ಬಂದೂಕು ತಯಾರಿ..!
shimoga | Shimoga : An unknown youth died! ಶಿವಮೊಗ್ಗ : ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಯುವಕ ಸಾವು! Next post vijayanagara | ವಿಜಯನಗರ – ತುಂಗಾಭದ್ರ ನದಿಯಲ್ಲಿ ಕೊಲೆಗೀಡಾದ ಯುವಕನ ಶವ ಪತ್ತೆ