shimoga | ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕ : ಕೆಲಸ ಕೊಡಿಸುವುದಾಗಿ ಹಣ ವಸೂಲಿಗಿಳಿದ ಮಧ್ಯವರ್ತಿಗಳು!

Job Information | Applications invited for the posts of Anganwadi workers and helpers in Shivamogga and Bhadravati taluks. ಉದ್ಯೋಗ ಮಾಹಿತಿ | ಶಿವಮೊಗ್ಗ - ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ - ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ (shivamogga), ಸೆ. 13: ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 7 ತಾಲೂಕುಗಳಲ್ಲಿ ಖಾಲಿಯಿರುವ, 126 ಅಂಗನವಾಡಿ (anganwadi) ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯ ಕಂದಾಯ ಗ್ರಾಮ / ವಾರ್ಡ್ ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ (puc) ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ (sslc) ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ (online application).

ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ (tahsildar) ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ (dc) ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.

ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು (candidates) ಗಳಿಸಿರುವ ಅಂಕಗಳ (marks card) ಆಧಾರದ ಮೇಲೆ ಪಾರದರ್ಶಕವಾಗಿ (transparency) ಆಯ್ಕೆ ಮಾಡಲಾಗುವುದು. ಕೆಲವು ಮಧ್ಯವರ್ತಿಗಳು (intermediaries) ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿವೆ.

ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (department of women and child development) ಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →