ಶಿವಮೊಗ್ಗ, 7: ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ನಗರದ ಯುವ ಮುಖಂಡ ಚಂದ್ರು ಗೆಡ್ಡೆ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಜೊತೆಗೆ ಸಂಘದ ಶಿವಮೊಗ್ಗ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಕೇಶ್ ಕಾಶಿಪುರ, ಸಹ ಕಾರ್ಯದರ್ಶಿಯಾಗಿ ಕೆ.ಎಲ್.ಪವನ್, ಜಿಲ್ಲಾ ನಿರ್ದೇಶಕರುಗಳಾಗಿ ಎಂ.ರಾಕೇಶ್ ಕುಮಾರ್, ಟಿ.ಗುರುಪ್ರಸಾದ್, ರಾಹುಲ್ ಸೀಗೆಹಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕುರುಬರ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಧನ್ಯವಾದ: ‘ತಮ್ಮ ಮೇಲೆ ನಂಬಿಕೆಯಿಟ್ಟು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ. ಸಮಾಜದ ಶ್ರೇಯೋಭಿವೃದ್ದಿಗೆ ನಿಸ್ವಾರ್ಥವಾಗಿ ಶ್ರಮಿಸುತ್ತೆನೆ. ಜೊತೆಗೆ ತಮಗೆ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಿದ ಸಂಘದ ಪ್ರಮುಖರಿಗೆ ಧನ್ಯವಾದ ಅರ್ಪಿಸುವುದಾಗಿ’ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಚಂದ್ರುಗೆಡ್ಡೆ ಅವರು ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರು ಗೆಡ್ಡೆ
