gruha laxmi update | ಗೃಹ ಲಕ್ಷ್ಮೀ ಯೋಜನೆ | 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ – ಸಚಿವರ ಹೇಳಿಕೆ
ಬೆಂಗಳೂರು (bengaluru), ಸೆ. 17: ಗೃಹ ಲಕ್ಷ್ಮೀ ಯೋಜನೆಯಡಿ ಬಾಕಿಯಿರುವ 2 ತಿಂಗಳ ಮೊತ್ತವನ್ನು, ಒಂದೇ ಬಾರಿಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (women and child development minister laxmi hebbalkar) ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸೆ. 16 ರಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದೆ ಗೃಹ ಲಕ್ಷ್ಮೀ ಯೋಜನೆ (gruha laxmi scheme) ಯಡಿ ಸೌಲಭ್ಯ ಕಲ್ಪಿಸಲು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿತ್ತು. ಅವರಿಗೂ ಕೂಡ ಏಕಕಾಲದಲ್ಲಿಯೇ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪಾವತಿಸುವ ಗೃಹ ಲಕ್ಷ್ಮೀ (gruha laxmi) ಯೋಜನೆಯನ್ನು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಈ ಯೋಜನೆ ನಿತ್ಯ, ಸತ್ಯ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಚಿತ್ರರಂಗದ ಕಲಾವಿದೆಯರ (kannada film female artists) ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಿತಿ ರಚನೆಯಾಗಬೇಕು. ಮುಖ್ಯಮಂತ್ರಿಗಳು ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಎಲ್ಲ ಯಾವ ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು ಎಂದರು.
ಅಂಗನವಾಡಿ ಕೇಂದ್ರ (anganwadi centers) ಗಳಿಗೆ ಅಕ್ಟೋಬರ್ 1 ರಿಂದಲೇ ಗಟ್ಟಿ ಬೆಲ್ಲ ನೀಡಲಾಗುವುದು ಎಂದು ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
