ಶಿವಮೊಗ್ಗ, ಮಾ. 9: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಯ ಪ್ರಯೋಗಾಲಯದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು – 01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಗಾಗಿ ಸಂಸ್ಥೆಯ ವೆಬ್‌ಸೈಟ್ www.sims-shimoga.com ರಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ದಿ: 18/03/2023 ರಂದು ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

