shimoga | lokayukta | ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ

Shimoga : Gram panchayat secretary caught with bribe money! ಶಿವಮೊಗ್ಗ : ಲಂಚದ ಹಣದ ಸಮೇತ ಸಿಕ್ಕಿಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ!

ಶಿವಮೊಗ್ಗ (shivamogga), ಸೆ. 18: ಕರ್ನಾಟಕ ಲೋಕಾಯುಕ್ತ ಪೊಲೀಸ್ (lokayukta police) ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟಂಬರ್-2024 ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ (public grievance) ಅರ್ಜಿ ಸ್ವೀಕಾರ ಸಭೆ ನಡೆಸುವರು. 

ಸೆ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸೊರಬ (soraba) ತಾಲೂಕು ಕಚೇರಿ ಸಭಾಂಗಣ, ಸೆ.24 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ (thirthahalli) ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ (shirkaripura) ತಾಲೂಕು ಕಚೇರಿ ಸಭಾಂಗಣ, 

ಸೆ.25 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸಾಗರ (sagara) ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಹೊಸನಗರ (hosanagara) ತಾಲೂಕು ಕಚೇರಿ ಸಭಾಂಗಣ,

ಸೆ.26 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ (bhadravati) ತಾಲೂಕು ಪಂಚಾಯಿತಿ ಸಭಾಂಗಣ, ಸೆ-27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಶಿವಮೊಗ್ಗ (shimoga) ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →