
cm siddaramaiah | ಮಾದಕ ವಸ್ತುಗಳ ದಂಧೆ ನಿಯಂತ್ರಿಸದ ಪೊಲೀಸರ ವಿರುದ್ದ ಕ್ರಮ : ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರು (bengaluru), ಸೆ. 18: ರಾಜ್ಯದಲ್ಲಿ ಡ್ರಗ್ (drug) ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (chief minister siddaramaiah) ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ (narcotics epidemic and control) ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ನಿಯಂತ್ರಣಕ್ಕೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರಿರಲಿದ್ದಾರೆ ಎಂದರು.
ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಮಾದಕ ವಸ್ತುಗಳ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧವೇ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.
ಅಗತ್ಯಬಿದ್ದರೆ ಹೊಸ ಕಾನೂನು ಮಾಡ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡ್ತೇವೆ. ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮಕೈಗೊಳ್ಳುತ್ತೆವೆ. NCC, NGO ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲಾಗುವುದು. ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮಕೈಗೊಳ್ಳಲಾಗುವುದು ಎಂದರು.
ಮಾದಕ ವಸ್ತು ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಬೀಳಬೇಕು. ಈ ನಿಟ್ಟಿನಲ್ಲಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ಕೊಡುವ ಜೊತೆಗೆ, ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.