
BREAKING NEWS | ಸಿದ್ದರಾಮಯ್ಯಗೆ ಮತ್ತೊಂದು ಶಾಕ್ : ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ!
ಬೆಂಗಳೂರು (bengaluru), ಸೆ. 25: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವ ಪೂರ್ವಾನುಮತಿ ರದ್ದುಗೊಳಿಸುವಂತೆ ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಹೈಕೋರ್ಟ್ (highcourt) ವಜಾಗೊಳಿಸಿದ್ದ ಬೆನ್ನಲ್ಲೇ, ಬುಧವಾರ ಬೆಂಗಳೂರಿನ ಜನಪ್ರತಿಧಿಗಳ ನ್ಯಾಯಾಲಯವು ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ (lokayukta enquiry) ಆದೇಶ ಹೊರಡಿಸಿದೆ.
ಮೂರು ತಿಂಗಳೊಳಗೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಇದರಿಂದ ಸಿಎಂ (cm siddaramaiah) ವಿರುದ್ದ ಎಫ್.ಐ.ಆರ್ (FIR) ದಾಖಲಾಗುವ ಸಾಧ್ಯತೆ ಹೆಚ್ಚಾಗಿದೆ.
ಮುಡಾ ಹಗರಣಕ್ಕೆ (muda scam) ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಿಎಂ ವಿರುದ್ದ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದರು.
ನ್ಯಾಯಾಧೀಶರು ವಾದ – ಪ್ರತಿವಾದ ಆಲಿಸಿ, ತೀರ್ಪು ಕಾಯ್ದಿರಿಸಿದ್ದರು. ಅಷ್ಟರಲ್ಲಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ನಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದ ಹಿನ್ನೆಲೆಯಲ್ಲಿ, ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪು ನೀಡಿದೆ. ತನಿಖೆ ನಡೆಸಿ, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಆದೇಶಿಸಿದೆ.
Muda case : special court orders filing of FIR in Muda case, Lokayukta to probe Siddaramaiah