
shimoga | ಶಿವಮೊಗ್ಗ ನಾಗರೀಕರೇ ಎಚ್ಚರ…!ಅಪಾಯಕಾರಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ : ಅಧಿಕಾರಿಗಳ ತಂಡದ ದಿಢೀರ್ ದಾಳಿ!!
ಶಿವಮೊಗ್ಗ (shimoga), ಸೆ. 29: ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಈ ನಡುವೆ ಅಸಲಿ ಬೆಳ್ಳುಳ್ಳಿ ಜೊತೆ ಸಿಮೆಂಟ್ (cement garlic) ನಿಂದ ತಯಾರಿಸಿದ ಬೆಳ್ಳುಳ್ಳಿ ಮಾರಾಟ ಮಾಡುತ್ತಿದ್ದ ವರದಿಗಳು ದೇಶದ ಹಲವೆಡೆ ಇತ್ತೀಚೆಗೆ ಕೇಳಿಬಂದಿತ್ತು. ಇದೀಗ, ಕೇಂದ್ರ ಸರ್ಕಾರದಿಂದ ನಿಷೇಧಿಸಲ್ಪಟ್ಟರುವ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುವ, ಚೀನಾ ದೇಶದ ಬೆಳ್ಳುಳ್ಳಿ (china garlic) ಮಾರಾಟವಾಗುತ್ತಿರುವ ದೂರುಗಳು ಕೇಳಿಬರಲಾರಂಭಿಸಿವೆ.
ಈ ನಡುವೆ, ಶಿವಮೊಗ್ಗ ನಗರದ ವಿವಿಧೆಡೆಯೂ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ (banned chinese garlic sale in shimoga markets), ಎಗ್ಗಿಲ್ಲದೆ ನಡೆಯುತ್ತಿರುವ ದೂರುಗಳು ಬಂದಿವೆ! ಈ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ಸೆ. 28 ರ ಶನಿವಾರ ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದೆ.
ಶಿವಮೊಗ್ಗದ ಎಪಿಎಂಸಿ ತರಕಾರಿ ಮಾರುಕಟ್ಟೆ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾದ ಏಳೆಂಟು ಅಂಗಡಿಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದೆ. ಶಂಕಿತ ಚೀನಾ ಬೆಳ್ಳುಳ್ಳಿ ವಶಕ್ಕೆ ಪಡೆದುಕೊಂಡಿದೆ.
‘ವಶಕ್ಕೆ ಪಡೆದ ಬೆಳ್ಳುಳ್ಳಿಯ ಸ್ಯಾಂಪಲ್ ಗಳನ್ನು ಬೆಂಗಳೂರಿನ ಪ್ರಯೋಗಾಲಯದ ಪರೀಕ್ಷೆಗೆ (lab test) ರವಾನಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ, ಚೀನಾ ಬೆಳ್ಳುಳ್ಳಿ (china garlic) ಹೌದೋ? ಅಲ್ಲವೋ? ಎಂಬುವುದರ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿದೆ. ಅಲ್ಲಿಯವರೆಗೂ ಶಂಕಿತ ಬೆಳ್ಳುಳ್ಳಿ ಮಾರಾಟ ಮಾಡದಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡದ ಮೂಲಗಳು ತಿಳಿಸಿವೆ.
ಆರೋಗ್ಯಕ್ಕೆ ಹಾನಿಕಾರಕ : ಚೀನಾ ಬೆಳ್ಳುಳ್ಳಿಗೆ ಕೃಷಿ ಸಮಯದಲ್ಲಿ ಅತೀ ಹೆಚ್ಚು ಪ್ರಮಾಣದ ಕೀಟನಾಶಕ ಹಾಗೂ ರಾಸಾಯನಿಕಗಳನ್ನು ಬಳಕೆ ಮಾಡಲಾಗುತ್ತದೆ (china garlic contained high levels of pesticides). ಇದನ್ನು ಸೇವಿಸುವ ನಾಗರೀಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಕಾರಣದಿಂದಲೇ 10 ವರ್ಷಗಳ ಹಿಂದೆಯೇ ಭಾರತ ಸರ್ಕಾರ ಚೀನಾ ಬೆಳ್ಳುಳ್ಳಿ ಆಮದು ನಿಷೇಧಿಸಿತ್ತು. ದೇಶದಲ್ಲಿ ಈ ಬೆಳ್ಳುಳ್ಳಿ ಮಾರಾಟ ನಿರ್ಬಂಧಿಸಿತ್ತು.
ಚೀನಾ ಬೆಳ್ಳುಳ್ಳಿಗೆ ಹೋಲಿಸಿದರೆ, ಭಾರತದಲ್ಲಿ ಬೆಳ್ಳುಳ್ಳಿ ಬೆಳೆಯುವ ವೇಳೆ ಕಡಿಮೆ ಪ್ರಮಾಣದ ರಸಗೊಬ್ಬರ ಹಾಗೂ ರಾಸಾಯನಿಕಗಳ ಬಳಕೆ ಮಾಡಲಾಗುತ್ತದೆ. ಇದು ರುಚಿಕರ ಮತ್ತು ಆರೋಗ್ಯಕರವಾಗಿರುತ್ತದೆ. ಆದರೆ ಚೀನೀ ಬೆಳ್ಳುಳ್ಳಿಯು ಕಡಿಮೆ ದರಕ್ಕೆ ಲಭ್ಯವಾಗುತ್ತದೆ. ಈ ಕಾರಣದಿಂದ ವಾಮಮಾರ್ಗದಲ್ಲಿ ದೇಶದ ವಿವಿಧ ಮಾರುಕಟ್ಟೆಯಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ.
In the meantime, there have been definite complaints about the sale of Chinese garlic being banned in various parts of Shimoga city. In this background, a team of officials under the Food Safety and Quality Act has raided various places and conducted inspections.