
film news | ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ
ನವದೆಹಲಿ (delhi), ಸೆ. 30: ಹಿಂದಿ ಸಿನಿಮಾ ರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ, ದೇಶದ ಸಿನಿಮಾ ರಂಗದಲ್ಲಿ ನೀಡಲಾಗುವ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕಳೆದ ಕೆಲ ತಿಂಗಳುಗಳ ಹಿಂದಷ್ಟೆ ಮಿಥುನ್ ಚಕ್ರವರ್ತಿ ಅವರು ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇದರ ಬೆನ್ನಲ್ಲೆ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವಕ್ಕೂ ಪಾತ್ರರಾಗಿದ್ದಾರೆ.
ಮಿಥುನ್ ಚಕ್ರವರ್ತಿ ಅವರು ಸಿನಿಮಾ ಮಾತ್ರವಲ್ಲದೆ ರಾಜಕಾರಣಿಯಾಗಿ, ಟಿವಿ ನಿರೂಪಕರಾಗಿಯೂ ಹೆಸರು ಸಂಪಾದಿಸಿದ್ದಾರೆ. ಸಿನಿಮಾಗಳ ನಿರ್ಮಾಪಕರಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಅವರು ಸಿನಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ.
1950 ರಲ್ಲಿ ಜನಿಸಿದ್ದ ಮಿಥುನ್ ಚಕ್ರವರ್ತಿ ಅವರು,1976 ರಲ್ಲಿ ‘ಮೃಗಾಯ’ ಸಿನಿಮಾದಲ್ಲಿ ನಟಿಸುವ ಮೂಲಕ, ಚಿತ್ರರಂಗಕ್ಕೆ ಕಾಲಿರಿಸಿದ್ದರು. ಆಗ ಅವರಿಗೆ 26 ವರ್ಷವಾಗಿತ್ತು. ಮೊದಲ ಸಿನಿಮಾದಲ್ಲಿನ ಅಭಿನಯಕ್ಕೆ ಅವರಿಗೆ ರಾಷ್ಟ್ರ ಪ್ರಶಸ್ತಿ ಗೌರವಕ್ಕೆ ಪಾತರಾಗಿದ್ದರು.
ಅಕ್ಟೋಬರ್ 08 ರಂದು ನಡೆಯುವ ನ್ಯಾಷನಲ್ ಫಿಲಂ ಅವಾರ್ಡ್ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಪ್ರದಾನ ಮಾಡಲಾಗುತ್ತಿದೆ.
ಅಭಿನಂದನೆ : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ಮಿಥುನ್ ಚಕ್ರವರ್ತಿ ಅವರಿಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಅಭಿನಂದನೆ ಸಲ್ಲಿಸಿದ್ದಾರೆ.
New Delhi : Veteran Hindi cinema actor Mithun Chakraborty has been honored with the dadasaheb phalke award, the highest honor given in the country’s cinema industry.