ಟ್ರಾನ್ಸ್’ಫಾರ್ಮಾರ್ ಸ್ಫೋಟ :  ಮನೆಗೆ ಹೊತ್ತಿದ ಬೆಂಕಿ!

ಶಿವಮೊಗ್ಗ, ಮಾ. 11: ವಿದ್ಯುತ್ ಪರಿವರ್ತಕ (ಟ್ರಾನ್ಸ್’ಫಾರ್ಮಾರ್) ಸ್ಫೋಟಿಸಿದ ಪರಿಣಾಮ, ಮನೆಯೊಂದರಲ್ಲಿ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯ ಗೋಪಿಶೆಟ್ಟಿಕೊಪ್ಪ ಬಡಾವಣೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಎಲ್.ಐ.ಸಿ. ಏಜೆಂಟ್ ಶ್ರೀಧರಮೂರ್ತಿ ಎಂಬುವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಫ್ರಿಡ್ಜ್, ಬಟ್ಟೆ, ದಿನಸಿ ಸಾಮಗ್ರಿಗಳು ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣ, ವಿದ್ಯುತ್ ವೈರಿಂಗ್ ಗಳು ಸುಟ್ಟು ಕರಕಲಾಗಿವೆ. ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಮನೆಗೆ ಹೊತ್ತಿದ್ದ ಬೆಂಕಿ ನಂದಿಸಿದೆ.

‘ಬಡಾವಣೆಯಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮಾರ್ ವೊಂದು ಸ್ಫೋಟಗೊಂಡ ನಂತರ ಶಾರ್ಟ್ ಸರ್ಕ್ಯೂಟ್ ಉಂಟಾಗಿ ತಾವು ಬಾಡಿಗೆಗಿರುವ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನೆ ನಡೆದ ವೇಳೆ ತಾವು ಕಾರ್ಯನಿಮಿತ್ತ ಮನೆಯಿಂದ ಹೊರತೆರಳಿದ್ದೆ. ಇದರಿಂದ ಬದುಕುಳಿದುಕೊಂಡಿದ್ದೆನೆ’ ಎಂದು ಶ್ರೀಧರಮೂರ್ತಿ ಅವರು ಮಾಹಿತಿ ನೀಡಿದ್ದಾರೆ.

ಬಡಾವಣೆಯ ಹಲವು ಮನೆಗಳಲ್ಲಿ ಟಿವಿ, ಫ್ರೀಡ್ಜ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಳಾಗಿವೆ. ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮಾರ್ ದುರಸ್ತಿಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *