A new system will be implemented in the offices of the sub-registrar of Shimoga district : Real estate registration will fall to irregularities! ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜಾರಿಯಾಗಲಿದೆ ಹೊಸ ವ್ಯವಸ್ಥೆ : ಸ್ಥಿರಾಸ್ತಿ ನೊಂದಣಿ ಅಕ್ರಮಗಳಿಗೆ ಬೀಳಲಿದೆ ಕಡಿವಾಣ!

shimoga | ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿಯಾಗಲಿದೆ ಹೊಸ ವ್ಯವಸ್ಥೆ : ಸ್ಥಿರಾಸ್ತಿ ನೊಂದಣಿ ಅಕ್ರಮಗಳಿಗೆ ಬೀಳಲಿದೆ ಕಡಿವಾಣ!

ಶಿವಮೊಗ್ಗ (shivamogga), ಅ. 1: ಅಕ್ಟೋಬರ್ 07 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಗರಾಭಿವೃದ್ಧಿ ಇಲಾಖೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ  ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.

ಶಿವಮೊಗ್ಗ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು, ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು  ಕಾವೇರಿ-2 ತಂತ್ರಾಂಶದೊಂದಿಗೆ 23/09/2024 ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ, ಇ-ಆಸ್ತಿ ತಂತ್ರಾಂಶವನ್ನು ರೂಪಿಸಲಾಗಿದೆ. ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ  2020 ರಿಂದ ನೋಂದಣಿ ಮಾಡಲಾಗುತ್ತಿದೆ. ಇದು ಯಶಸ್ವಿಯಾಗಿದೆ.

ಇ-ಖಾತಾ ಸಂಯೋಜನೆಯಿಂದ, ಸ್ಥಿರಾಸ್ತಿಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯಬಹುದು. ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗಲಿದೆ. ನೈಜ ಮಾಲೀಕರಿಗೆ ವಂಜಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸಬಹುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸುಲಭ ಸಾಧ್ಯವಾಗಲಿದೆ. 

ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದ್ದು, ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ : ಎನ್ಐಎ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Previous post shimoga | ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ : NIA ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
shimoga | 'Death is certain if rabies comes!': District Health Officer Dr. Nataraj warns ‘ರೇಬಿಸ್ ಬಂದರೆ ಸಾವು ಖಚಿತ!’ : ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಟರಾಜ್ ಎಚ್ಚರಿಕೆ Next post shimoga | ‘ರೇಬಿಸ್ ಬಂದರೆ ಸಾವು ಖಚಿತ!’ : ಶಿವಮೊಗ್ಗ DHO ಡಾ.ನಟರಾಜ್ ಎಚ್ಚರಿಕೆ