gruha laxmi scheme | ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಯಾವಾಗ?
ಬೆಳಗಾವಿ (belagavi), ಅ. 4: ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹ ಲಕ್ಷ್ಮೀ’ ಯೋಜನೆಯ, ಜುಲೈ ಹಾಗೂ ಆಗಸ್ಟ್ ತಿಂಗಳ ಮೊತ್ತ, ಇಲ್ಲಿಯವರೆಗೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ನಡುವೆ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಹಣ ಸಂದಾಯದ ಕುರಿತಂತೆ ಮಹತ್ವದ ಮಾಹಿತಿ ನೀಡಿದ್ದಾರೆ.
ಸೆ. 3 ರಂದು ಬೆಳಗಾವಿ ಜಿಲ್ಲೆಯ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ‘ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣವು, ಅಕ್ಟೋಬರ್ 7 ಹಾಗೂ 9 ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
ತಾಂತ್ರಿಕ ಕಾರಣಗಳಿಂದ ಹಣ ವರ್ಗಾವಣೆ ವಿಳಂಬವಾಗಿತ್ತು. ನವರಾತ್ರಿ ಹಬ್ಬದ ವೇಳೆ ಎರಡೂ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ವರ್ಗಾವಣೆಯಾಗಲಿದೆ. ಹಣ ಸಿಕ್ಕ ಬಳಿಕ ಭರ್ಜರಿಯಾಗಿ ಹೋಳಿಕೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು ಸಚಿವರು ತಿಳಿಸಿದ್ದಾರೆ.
ಗೃಹ ಲಕ್ಷ್ಮೀ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ. ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ. ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಇದೇ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
The amount for the month of July and August under the ‘Gruha Lakshmi’ scheme has not been credited to the beneficiary’s account till date. Meanwhile, the Minister of Women and Child Welfare Department, Lakshmi Hebbalkar, has given important information about the payment of money. He clarified that the transfer will be made to the beneficiary’s bank account on October 7 and 9.
