shimoga job news | ಶಿವಮೊಗ್ಗ – ಅ.8 ರಂದು ಉದ್ಯೋಗ ಮೇಳ : ಆಗಮಿಸಲಿವೆ ಪ್ರತಿಷ್ಠಿತ ಖಾಸಗಿ ಕಂಪನಿಗಳು

Shivamogga : Job Fair on March 27 – Direct Interviews for Candidate Selection ಶಿವಮೊಗ್ಗ : ಮಾರ್ಚ್ 27 ರಂದು ಉದ್ಯೋಗ ಮೇಳ – ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ

ಶಿವಮೊಗ್ಗ (shivamogga), ಅ. 5: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ, ಅಕ್ಟೋಬರ್ 08 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. 

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9380663606/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

A job fair was organized by the Shimoga District Employment Exchange Office on October 08 at 10 am at the District Employment Exchange Office.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →