Bengaluru : VS Ugrappa is the voice of the voiceless – CM Siddaramaiah ಬೆಂಗಳೂರು : ವಿ.ಎಸ್.ಉಗ್ರಪ್ಪ ಧ್ವನಿ ಇಲ್ಲದವರ ದನಿ – ಸಿಎಂ ಸಿದ್ದರಾಮಯ್ಯ

bengaluru | ಬೆಂಗಳೂರು : ವಿ.ಎಸ್.ಉಗ್ರಪ್ಪ ಧ್ವನಿ ಇಲ್ಲದವರ ದನಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು (bengaluru), ಅ. 6: ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು ಎಂದು ಉಗ್ರಪ್ಪ ಅವರ ಹೋರಾಟದ ದಿನಗಳನ್ನು ಸ್ಮರಿಸಿದರು.

ಉಗ್ರಪ್ಪ ಬಹಳ ನಿಷ್ಠುರವಾದಿ. ಸಾರ್ವಜನಿಕ ಜೀವನದಲ್ಲಿ ಮೌಲ್ಯಗಳ ವಿಚಾರದಲ್ಲಿ ಯಾರ ಜೊತೆಗೂ ರಾಜಿ ಮಾಡಿಕೊಳ್ಳುವುದಿಲ್ಲ. ರಾಜಕೀಯ ಹೋರಾಟದಲ್ಲಿ ಉಗ್ರರಾಗಿದ್ದರೂ‌ ಮನೆಯಲ್ಲಿ ಮಾತ್ರ ಸೌಮ್ಯವಾದಿ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಸಂವಿಧಾನದ ಆಚೆಗೆ  ಯೋಚಿಸುವವರಲ್ಲ. ವಕೀಲರಾಗಿ ಹಲವಾರು ವರ್ಷ ಸಂವಿಧಾನದ ಪಾಠ ಮಾಡಿ ಈಗ ಸಂವಿಧಾನ‌ ನಾಲಗೆ ತುದಿಯಲ್ಲೇ ಇದೆ. ತಪ್ಪುಗಳನ್ನು ಹುಡುಕುವುದರಲ್ಲಿ ಉಗ್ರಪ್ಪರು ನಿಸ್ಸೀಮರು ಎಂದು ಮೆಚ್ಚುಗೆ ಸೂಚಿಸಿದರು.

ಎಲ್ಲಾ ಕಾಲದಲ್ಲೂ ದ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಾ ಬಂದಿದಾರೆ. ಇವರ ಪ್ರತೀ ಮಾತು, ಭಾಷಣ ಅವಕಾಶ ವಂಚಿತರ ಪರವಾಗಿಯೇ ಇರುತ್ತದೆ ಎಂದರು.

ಕಾನೂನುಗಳನ್ನು ಚೆನ್ನಾಗಿ ಅರಿತಿರುವ ಉಗ್ರಪ್ಪ ಅವರ ಅನುಭವ, ತಿಳಿವಳಿಕೆ ಪಕ್ಷ ಸಂಘಟನೆಗೆ ಬಹಳ ನೆರವು ನೀಡಿದೆ. ರಾಜಕಾರಣದ ಕೆಲವು ಹಂತಗಳಲ್ಲಿ ಉಗ್ರಪ್ಪ ಅವರಿಗೆ ನೆರವಾಗಲು ಸಾಧ್ಯವಾಗಿದೆ. ಉಳಿದ ಸಂದರ್ಭಗಳಲ್ಲಿ ಸಾಧ್ಯವಾಗಿಲ್ಲ. ಆದರೆ ಎಲ್ಲಾ ಏರಿಳಿತಗಳಲ್ಲೂ ಉಗ್ರಪ್ಪ ಅವರು ತಮ್ಮ ಸಿದ್ಧಾಂತ ಹಾಗೂ ಮೌಲ್ಯಗಳಲ್ಲಿ ರಾಜಿ ಮಾಡಿಕೊಳ್ಳಲಿಲ್ಲ ಎಂದು ಮೆಚ್ಚುಗೆ ಸೂಚಿಸಿದರು.

ಉಗ್ರಪ್ಪ ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ‌ ಸಿಗಬೇಕಿತ್ತು. ಸಿಕ್ಕಿಲ್ಲ ಎನ್ನುವ ಬೇಸರ ನನಗೂ ಇದೆ. ಮುಂದೆ ಅವಕಾಶ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ರೆಡ್ಡಿ ಬ್ರದರ್ಸ್ ವಿರುದ್ಧ ತೋಳು ತಟ್ಟಿದ ಹೋರಾಟಕ್ಕೆ ಉಗ್ರಪ್ಪರೂ ಕಾರಣ. ನಾನು ಬಳ್ಳಾರಿ ಪಾದಯಾತ್ರೆ ಮಾಡುವುದಕ್ಕೂ ಮೊದಲೇ ಉಗ್ರಪ್ಪ ಗಣಿ ಹಗರಣ ಮತ್ತು ರೆಡ್ಡಿ ಬ್ರದರ್ಸ್ ವಿಚಾರದ ಬಗ್ಗೆ ಸತ್ಯ ಶೋಧನಾ ವರದಿ ನೀಡಿದ್ದರು. ಈ ವರದಿ ಬಳ್ಳಾರಿ ಪಾದಯಾತ್ರೆಗೆ ನಾನು ತೋಳು ತಟ್ಟುವಂತಾಯಿತು. ಪಾದಯಾತ್ರೆ ಯಶಸ್ವಿಗೆ ಉಗ್ರಪ್ಪ ಅವರ ಪಾತ್ರ ಕೂಡ ಪ್ರಮುಖವಾದದ್ದು ಎಂದರು.

ಉಗ್ರಪ್ಪ ಮತ್ತು ನಾನು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಂಡವರಲ್ಲ. ಈ ಕಾರಣಕ್ಕೇ ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗ್ತದೆ ನಾನೂ ನೋಡ್ತೀನಿ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ಕೂಡ ರವಾನಿಸಿದರು.

ಉಗ್ರಪ್ಪ ಮತ್ತು ಪಿ.ಜಿ.ಆರ್.ಸಿಂದ್ಯಾ ಇಬ್ಬರೂ RSS ನಲ್ಲಿದ್ದವರು. ಇಬ್ಬರಿಗೂ RSS ನ ದ್ವೇಷದ, ತಾರತಮ್ಯದ, ಜಾತಿವಾದದ ಸತ್ಯ ಗೊತ್ತಾಗಿ RSS ನಿಂದ ಹೊರಗೆ ಬಂದು ಸಾಮಾಜಿಕ ನ್ಯಾಯದ ಪರವಾಗಿ ನಿಂತಿದ್ದು, ಪ್ರಬುದ್ಧ ಜನಪರ ರಾಜಕಾರಣಿ ಎಂದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಮಾಜದ ಗುರುಗಳಾದ ಆತ್ಮಾನಂದ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

VS Ugrappa is capable and a leader of the people. Chief Minister Siddaramaiah said that VS Ugrappa is the voice of the voiceless. Former MP V.S.Ugrappa’s life and struggle is based on Samarth Jana Nayak, who released the book and spoke.

Justice BA Patil President of Karnataka Land Grab Prohibition Special Court said that the protection of government property is the first duty of all of us and it is necessary to create awareness about it. ಸರ್ಕಾರಿ ಭೂ - ಕಬಳಿಕೆ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದವೂ ಪ್ರಕರಣ : ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿಗಳ ಎಚ್ಚರಿಕೆ Previous post shimoga | ಭೂ-ಕಬಳಿಕೆ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದವೂ ಪ್ರಕರಣ : ನ್ಯಾಯಮೂರ್ತಿಗಳ ಎಚ್ಚರಿಕೆ
sigandur bridge | When will Sigandur Bridge be inaugurated? ಸಿಗಂದೂರು ಸೇತುವೆ ಕಾಮಗಾರಿ ಸಮರೋಪಾದಿ : ಉದ್ಘಾಟನೆ ಯಾವಾಗ? Next post sigandur bridge | ಸಿಗಂದೂರು ಸೇತುವೆ ಕಾಮಗಾರಿ ಸಮರೋಪಾದಿ : ಉದ್ಘಾಟನೆ ಯಾವಾಗ?