shimoga | Indefinite strike : Shimoga district village administration services are in disarray! ಅನಿರ್ದಿಷ್ಟಾವಧಿ ಮುಷ್ಕರ : ಶಿವಮೊಗ್ಗ ಜಿಲ್ಲೆಯ ಗ್ರಾಮಾಡಳಿತ ಸೇವೆಗಳು ಅಸ್ತವ್ಯಸ್ತ!

shimoga | ಅನಿರ್ದಿಷ್ಟಾವಧಿ ಮುಷ್ಕರ : ಶಿವಮೊಗ್ಗ ಜಿಲ್ಲೆಯ ಗ್ರಾಮಾಡಳಿತ ಸೇವೆಗಳು ಅಸ್ತವ್ಯಸ್ತ!

ಶಿವಮೊಗ್ಗ (shivamogga), ಅ. 7: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಗ್ರಾಮ ಪಂಚಾಯ್ತಿ ಅಧಿಕಾರಿ – ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದ ಗ್ರಾಮ ಪಂಚಾಯ್ತಿ ಕಚೇರಿಗಳು ಬಾಗಿಲು ಮುಚ್ಚಿವೆ. ಆಡಳಿತಗಳಲ್ಲಿನ ಸೇವೆಗಳು ಸಂಪೂರ್ಣ ಅಸ್ತವ್ಯಸ್ತವಾಗಿವೆ!

ಕಳೆದ ನಾಲ್ಕು ದಿನಗಳಿಂದ ಗ್ರಾಪಂ ಅಧಿಕಾರಿ – ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೌಕರರು, ಸೆ. 7 ರಿಂದ ಜಿಲ್ಲೆಗಳ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿಯೂ ಗ್ರಾಪಂ ಆಡಳಿತಗಳ ಸೇವೆಗಳು ಸಂಪೂರ್ಣ ಬಂದ್ ಆಗಿದೆ. ಇದರಿಂದ ವಿವಿಧ ಸೇವೆಗಳಲ್ಲಿ ತೀವ್ರ ವ್ಯತ್ಯಯ ಕಂಡುಬರಲಾರಂಭಿಸಿದೆ. ನಾನಾ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ನಾಗರೀಕರು ಪರದಾಡುವಂತಾಗಿದೆ.

ಈ ನಡುವೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ನೌಕರರು ಕೂಡ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.  ಇದರಿಂದ ನಾಗರೀಕರು ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ.

ಎಚ್ಚೆತ್ತುಕೊಳ್ಳಲಿ : ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಪ್ರತಿಭಟನೆ ನಡೆಸುತ್ತಿರುವ ನೌಕರರ ಜೊತೆ ಸಮಾಲೋಚನೆ ನಡೆಸಬೇಕು. ನೌಕರರು ಕರ್ತವ್ಯಕ್ಕೆ ಹಾಜರಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಈ ಮೂಲಕ ನಾಗರೀಕರು ಎದುರಿಸುತ್ತಿರುವ ಸಮಸ್ಯೆ ಪರಿಹರಿಸಬೇಕು ಎಂದು ನಾಗರೀಕರು ಆಗ್ರಹಿಸುತ್ತಾರೆ.

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಅಧಿಕಾರಿ – ನೌಕರರು ಅ. 7 ರ ಸೋಮವಾರ ಶಿವಮೊಗ್ಗದ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧೆಡೆಯಿಂದ ನೂರಾರು ಗ್ರಾಪಂ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪಿಡಿಓ ನೌಕರರ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ನಾಯ್ಕ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಅಲ್ಲಿಯವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.

Gram panchayat officer-employees of the state have called for an indefinite strike demanding the fulfillment of various demands. Gram panchayat offices have closed their doors due to this. The services in the administrations are in complete disarray!

sigandur bridge | When will Sigandur Bridge be inaugurated? ಸಿಗಂದೂರು ಸೇತುವೆ ಕಾಮಗಾರಿ ಸಮರೋಪಾದಿ : ಉದ್ಘಾಟನೆ ಯಾವಾಗ? Previous post sigandur bridge | ಸಿಗಂದೂರು ಸೇತುವೆ ಕಾಮಗಾರಿ ಸಮರೋಪಾದಿ : ಉದ್ಘಾಟನೆ ಯಾವಾಗ?
Shimoga - Attack on the police: Rowdy sheeter shot in the leg! ಶಿವಮೊಗ್ಗ - ಪೊಲೀಸರ ಮೇಲೆ ದಾಳಿ : ರೌಡಿ ಶೀಟರ್ ಕಾಲಿಗೆ ಗುಂಡೇಟು! Next post shimoga | ಶಿವಮೊಗ್ಗ – ಪೊಲೀಸರ ಮೇಲೆ ದಾಳಿ : ರೌಡಿ ಶೀಟರ್ ಕಾಲಿಗೆ ಗುಂಡೇಟು!