ಶಿವಮೊಗ್ಗ (shivamogga), ಅ. 9: ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಈ ಕುರಿತಂತೆ ಅ. 9 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಶಿವಮೊಗ್ಗ ನಗರದ ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರ ಪಾಲಿಕೆ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಲಾಗಿದ್ದು, ಸದರಿ ಕೇಬಲ್ ಚಾಲನೆಗೊಳಿಸುವ ಪ್ರಕ್ರಿಯೆ ಅ.14 ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 14 ಮತ್ತು 15 ರ ಎರಡು ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
The Karnataka City Water Supply and Sewerage Board said that there will be a disruption in drinking water supply in Shimoga city for two days.

