
shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಕುಂದುಕೊರತೆ ಸಭೆ : ಯಾವಾಗ, ಎಲ್ಲೆಲ್ಲಿ?
ಶಿವಮೊಗ್ಗ (shivamogga), ಅ. 16: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು, ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್ – 2024 ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.
ಅ. 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ,
ಅ.22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ,
ಅ.23 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ ಮತ್ತು ಅ.24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
The District Officers of the Karnataka Lokayukta Police Division will hold a meeting to accept the grievence application from the public on the following days in the month of October – 2024 in various taluks of the district.