cinema news | 95 Minutes `prakaraṇa tanikhā hantadallide' Movie Releases This Week! 95 ನಿಮಿಷಗಳ `ಪ್ರಕರಣ ತನಿಖಾ ಹಂತದಲ್ಲಿದೆ' ಚಿತ್ರ ಈ ವಾರ ತೆರೆಗೆ!

cinema news | 95 ನಿಮಿಷಗಳ `ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

ಬೆಂಗಳೂರು (bengaluru) : ಶೀರ್ಷಿಕೆಯ ಕಾರಣದಿಂದ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ’. ಸುಂದರ್ ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು.

ಈ ಮೂಲಕವೇ ಭಿನ್ನ ಕಥಾನಕದ ಸುಳಿವು ಬಿಟ್ಟು ಕೊಟ್ಟಿದ್ದ `ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಈ ವಾರ ಅಂದರೆ, ಅಕ್ಟೋಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಶೀರ್ಷಿಕೆ ಕೇಳಿದಾಕ್ಷಣವೇ ಒಟ್ಟಾರೆ ಕಥೆಯ ಬಗ್ಗೆ ಒಂದು ಕಲ್ಪನೆ ಮೂಡಿಸಿಕೊಂಡಿದ್ದ ಪ್ರೇಕ್ಷಕರನ್ನೆಲ್ಲ ಟ್ರೈಲರ್ ಅಚ್ಚರಿಗೀಡುಮಾಡಿತ್ತು. ಹಾಗೆ ಮೂಡಿಕೊಂಡಿದ್ದ ನಿರೀಕ್ಷೆಗಳ ನಡುವೆ ಈ 95 ನಿಮಿಷಗಳ ವಿಶಿಷ್ಟ ಥ್ರಿಲ್ಲರ್ ತೆರೆಗಾಣಲು ದಿನಗಣನೆ ಶುರುವಾಗಿದೆ.

ವಿಶೇಷವೆಂದರೆ, ರಂಗಭೂಮಿಯಲ್ಲಿ ಹತ್ತಾರು ವರ್ಷಗಳಿಂದ ಪಳಗಿಕೊಂಡಿದ್ದವರೆಲ್ಲ ಸೇರಿ ಈ ಚಿತ್ರವನ್ನು ರೂಪಿಸಿದ್ದಾರೆ. ರಂಗಭೂಮಿಯ ವಾತಾವರಣದಲ್ಲಿಯೇ ಜೀವ ಪಡೆದಿದ್ದ ಈ ಚಿತ್ರವನ್ನು, ಚಿಂತನ್ ಕಂಬಣ್ಣ ನಿರ್ಮಾಣ ಮಾಡಿದ್ದಾರೆ. ಹೊಸತೇನನ್ನೋ ಸೃಷ್ಟಿಸಬೇಕೆಂಬ ತುಡಿತದೊಂದಿಗೆ ತಯಾರಾಗಿರುವ ಈ ಚಿತ್ರ ಈಗಾಗಲೇ ಟೈಟಲ್ ಟ್ರ್ಯಾಕ್, ಪೋಸ್ಟರ್, ಟ್ರೈಲರ್ ಮುಂತಾದವುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ.

ಶೀರ್ಷಿಕೆಯೇ ಇದೊಂದು ಕ್ರೈಂ ಜಾನರಿನ ಚಿತ್ರವೆಂಬಂತೆ ಸೂಚಿಸುವುದು ಸತ್ಯ. ಆದರೆ, ಅದೆಲ್ಲದರಾಚೆಗಿನ ಬೆರಗುಗಳನ್ನು 95 ನಿಮಿಷಗಳ ಈ ಥ್ರಿಲ್ಲರ್ ಸಿನಿಮಾ ಬಚ್ಚಿಟ್ಟುಕೊಂಡಿದೆ ಎಂಬ ಭರವಸೆ ಚಿತ್ರ ತಂಡದಲ್ಲಿದೆ.

ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಮಹೀನ್ ಕುಬೇರ್ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ.

ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್.ಜೆ  ಛಾಯಾಗ್ರಹಣ, ಶಿವೋಂ ಸಂಗೀತ ನಿರ್ದೇಶನ ಮತ್ತು ನಾನಿಕೃಷ್ಣ  ಸಂಕಲನ ಈ ಚಿತ್ರಕ್ಕಿದೆ. ವಿ ಎಫ್ ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ನಿಭಾಯಿಸಿದ್ದಾರೆ. ಬೆಂಗಳೂರು, ಕನಕಪುರ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣ ಈ ವಾರವೇ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

The film initially grabbed attention because of the title `prakaraṇa tanikhā hantadallide’. Directed by Sundar S, the trailer of this movie attracted the audience. By this way, the movie `prakaraṇa tanikhā hantadallide’, which had given a hint of a different plot, will be released across the state this week on October 18.

Shimoga : Gram panchayat secretary caught with bribe money! ಶಿವಮೊಗ್ಗ : ಲಂಚದ ಹಣದ ಸಮೇತ ಸಿಕ್ಕಿಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ! Previous post shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಕುಂದುಕೊರತೆ ಸಭೆ : ಯಾವಾಗ, ಎಲ್ಲೆಲ್ಲಿ?
In the first innings of the first Test match between India and New Zealand at the Chinnaswamy Stadium here on Thursday 5 Indian batsmen were out for '0' runs! ‘0’ ರನ್ ಗೆ 5 ಬ್ಯಾಟ್ಸ್’ಮನ್ ಗಳು ಔಟ್ – ಕ್ರಿಕೆಟ್ ಇತಿಹಾಸದಲ್ಲಿಯೇ ಕಳಪೆ ದಾಖಲೆಗೆ ಸಾಕ್ಷಿಯಾದ ಭಾರತದ ಕ್ರಿಕೆಟ್ ತಂಡ! Next post cricket news | ‘0’ ರನ್ ಗೆ 5 ಬ್ಯಾಟ್ಸ್’ಮನ್ ಗಳು ಔಟ್ – ಕಳಪೆ ದಾಖಲೆಗೆ ಸಾಕ್ಷಿಯಾದ ಭಾರತದ ಕ್ರಿಕೆಟ್ ತಂಡ!