Bengaluru building collapse case : CM instructs to take action against illegal building construction! ಬೆಂಗಳೂರು ಕಟ್ಟಡ ಕುಸಿತ ಪ್ರಕರಣ : ಕಾನೂನುಬಾಹಿರ ಕಟ್ಟಡ ನಿರ್ಮಾಣದ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ!

bengaluru | ಬೆಂಗಳೂರು : ಕಾನೂನುಬಾಹಿರ ಕಟ್ಟಡ ನಿರ್ಮಾಣದ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ!

ಬೆಂಗಳೂರು (bangalore), ಅ. 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ  ಗಂಭೀರ ಗಾಯಗಳಾಗಿವೆ.

ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. 

ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಸಿಎಂ ಸೂಚನೆ : ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು.

ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ , ಈ ದುರಾದೃಷ್ಟರ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು , ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು.

 ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ.  ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನುಮುಂದೆ ಇಂತಹ ಘಟನೆಗಳು ನಡೆಯದಂತೆ  ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ರಕ್ಷಣಾ ಕಾರ್ಯ : ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ.  ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು, ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ.

ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ಕ್ಲಿಯರ್ ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ , ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ , ಚನ್ನಪಟ್ಟಣ ಕ್ಷೇತ್ರಕ್ಕೆ ನಾಮಿನೇಷನ್  ಮಾಡಲು  ಸಿಪಿ ಯೋಗೇಶ್ವರ್, ಡಿಸಿಎಂನೊಂದಿಗೆ ಚನ್ನಪಟ್ಟಣಕ್ಕೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ಇದೇ ವೇಳೆ ಮಾಹಿತಿ ನೀಡಿದ್ದಾರೆ.

5 lakhs for those who died in the building collapse case. Chief Minister Siddaramaiah said that the compensation announcement has been made and the treatment of those injured in the incident will be fully borne by the government.

Shivamogga: Worker dies of electrocution in Holalur arecanut plantation! ಶಿವಮೊಗ್ಗ : ಹೊಳಲೂರು ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು! Previous post shimoga | ಶಿವಮೊಗ್ಗ : ಸಾಲುಸಾಲು ಭಿಕ್ಷುಕ, ನಿರ್ಗತಿಕ ವ್ಯಕ್ತಿಗಳ ಸಾವು ! – ಕಣ್ಮುಚ್ಚಿ ಕುಳಿತಿದೆಯೇ ಆಡಳಿತ ವ್ಯವಸ್ಥೆ?
Shimoga : The whim of the car driver – the traffic police constable escaped from danger! ಶಿವಮೊಗ್ಗ : ಕಾರು ಚಾಲಕನ ಹುಚ್ಚಾಟ – ಅಪಾಯದಿಂದ ಪಾರಾದ ಟ್ರಾಫಿಕ್ ಪೊಲೀಸ್ ಪೇದೆ! Next post shimoga | ಶಿವಮೊಗ್ಗ : ಕಾರು ಚಾಲಕನ ಹುಚ್ಚಾಟ – ಅಪಾಯದಿಂದ ಪಾರಾದ ಟ್ರಾಫಿಕ್ ಪೊಲೀಸ್ ಪೇದೆ!