
shimoga | ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣ – ಮೂವರ ಬಂಧನ!
ಶಿವಮೊಗ್ಗ (shivamogga), ಅ. 25: ಶಿವಮೊಗ್ಗ ನಗರ ಹಾಗೂ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಳಲ್ಲಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಗ್ರಾಮಾಂತರ ಠಾಣೆ : ಶಿವಮೊಗ್ಗದ ಕುವೆಂಪು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ, ಇಬ್ಬರು ಯುವಕರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಶಿವಮೊಗ್ಗ ಬಸವನಗುಡಿ ನಿವಾಸಿ ಭರತ್ ಟಿ ಯಾನೆ ಜಾನ್ ಭರತ್ (27) ಹಾಗೂ ರಾಗಿಗುಡ್ಡ ನಿವಾಸಿ ನರಸಿಂಹ ಎಸ್ ಯಾನೆ ದಾಸ (39) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಬಂಧಿತರಿಂದ 28 ಸಾವಿರ ರೂ. ಮೌಲ್ಯದ 668 ಗ್ರಾಂ ತೂಕದ ಒಣ ಗಾಂಜಾ ಮತ್ತು 400 ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇನ್ಸ್’ಪೆಕ್ಟರ್ ಸತ್ಯನಾರಾಯಣ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕುಂಸಿ ಠಾಣೆ : ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ತಾಲೂಕು ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಕುಂಸಿ ಠಾಣೆ ಪೊಲೀಸರು ಬಂಧಿಸಿದ ಘಟನೆ ಅ. 25 ರಂದು ನಡೆದಿದೆ.
ಬೀರನಕೆರೆ ಗ್ರಾಮದ ನಿವಾಸಿ ಚಂದ್ರನಾಯ್ಕ್ (46) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 15 ಸಾವಿರ ರೂ. ಮೌಲ್ಯದ 640 ಗ್ರಾಂ ತೂಕದ ಒಣ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ಸ್’ಪೆಕ್ಟರ್ ದೀಪಕ್ ಎಂ ಎಸ್, ಸಬ್ ಇನ್ಸ್’ಪೆಕ್ಟರ್ ಶಾಂತರಾಜ್ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
In two separate incidents in Shimoga city and Taluk, three people were arrested by the police on the charge of selling ganja.