shimoga | Shimoga : national highway is a thorn in the side of the students – the divine negligence of the administration! ಶಿವಮೊಗ್ಗ : ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕಂಟಕವಾಗಿರುವ ರಾಷ್ಟ್ರೀಯ ಹೆದ್ಧಾರಿ – ಆಡಳಿತದ ದಿವ್ಯ ನಿರ್ಲಕ್ಷ್ಯ! ವರದಿ : ಬಿ. ರೇಣುಕೇಶ್ b renukesha

shimoga | ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಕಂಟಕವಾಗಿರುವ ಹೆದ್ಧಾರಿ – ಆಡಳಿತದ ದಿವ್ಯ ನಿರ್ಲಕ್ಷ್ಯ!

ಶಿವಮೊಗ್ಗ (shivamogga), ಅ. 4: ಶಿವಮೊಗ್ಗ ನಗರದ ಗಾಡಿಕೊಪ್ಪದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ಧಾರಿಯು, ಸ್ಥಳೀಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ!

ಈಗಾಗಲೇ ಹಲವು ವಿದ್ಯಾರ್ಥಿಗಳು ಹೆದ್ಧಾರಿ ದಾಟಿಕೊಂಡು ಶಾಲೆ ಹಾಗೂ ಮನೆಗೆ ಹೋಗುವ ವೇಳೆ, ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾರೆ. ಇಷ್ಟೆಲ್ಲದರ ಹೊರತಾಗಿಯೂ ಇಲ್ಲಿಯವರೆಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ಕನಿಷ್ಠ ಕ್ರಮಗಳನ್ನು ಕೂಡ ಆಡಳಿತ ಕೈಗೊಂಡಿಲ್ಲ.

ಸಂಪೂರ್ಣ ನಿರ್ಲಕ್ಷ್ಯವಹಿಸಿದೆ. ಇದರಿಂದ ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ಶಾಲೆಗೆ ಹೋಗುವಂತಹ ದುಃಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ಹೆದ್ಧಾರಿಗೆ ಹೊಂದಿಕೊಂಡಂತೆ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಸರಿಸುಮಾರು 200 ಕ್ಕೂ ಅಧಿಕ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಹೆದ್ಧಾರಿ ದಾಟಿಕೊಂಡು ಶಾಲೆಗೆ ಹೋಗಬೇಕಾಗಿದೆ.

ಮತ್ತೊಂದೆಡೆ, ಸದರಿ ಹೆದ್ಧಾರಿಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಸಂಚಾರ ದಟ್ಟಣೆ ಹೆಚ್ಚಿದೆ. ಜೊತೆಗೆ ಮಿತಿಮೀರಿದ ವೇಗದಲ್ಲಿ ವಾಹನಗಳು ಸಂಚರಿಸುತ್ತವೆ. ಇದರಿಂದ ಮಕ್ಕಳು ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ಹೆದ್ಧಾರಿ ದಾಟಿಕೊಂಡು ಹೋಗುವ ವೇಳೆ ಅಪಾಯಕ್ಕೀಡಾಗುತ್ತಿದ್ದಾರೆ ಎಂದು ಸ್ಥಳೀಯರು ದೂರುತ್ತಾರೆ.

ಈ ಹಿಂದೆ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮಕೈಗೊಂಡಿದ್ದರು. ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಆದರೆ  ಇದೀಗ ಆ ವ್ಯವಸ್ಥೆಯೂ ಇಲ್ಲವಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಸಿಗ್ನಲ್ ಲೈಟ್ ಇಲ್ಲ : ಇನ್ನೊಂದೆಡೆ ಸರ್ಕಾರಿ ಶಾಲೆ ಸಮೀಪದ ಸರ್ಕಲ್ ಬಳಿ, ಸಿಗ್ನಲ್ ಲೈಟ್ ಅಳವಡಿಸಬೇಕೆಂಬ ಬೇಡಿಕೆಯಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯು, ಅನುದಾನ ಕೋರಿ ಮಹಾನಗರ ಪಾಲಿಕೆ ಆಡಳಿತಕ್ಕೆ ಪತ್ರ ಬರೆದಿದೆ. ಆದರೆ ಇಲ್ಲಿಯವರೆಗೂ ಪಾಲಿಕೆ ಆಡಳಿತ ಅನುದಾನ ಬಿಡುಗಡೆ ಮಾಡಿಲ್ಲ. ಪಾಲಿಕೆ ಆಡಳಿತವು ಸಾಮಾಜಿಕ ಹೊಣೆಗಾರಿಕೆ, ಕಳಕಳಿಯನ್ನೇ ಮರೆತಿದೆ ಎಂದು ಸ್ಥಳೀಯರು ದೂರುತ್ತಾರೆ.

ಇದೆಲ್ಲದರ ನಡುವೆ, ಈ ಹಿಂದೆ ರಾಷ್ಟ್ರೀಯ ಹೆದ್ಧಾರಿ ಇಲಾಖೆಯು ಶಾಲಾ ಮಕ್ಕಳ ಅನುಕೂಲಕ್ಕೆ ಸ್ಕೈ ವಾಕರ್ ನಿರ್ಮಿಸಿ ಕೊಡುವ ಭರವಸೆ ನೀಡಿತ್ತು. ಇಲ್ಲಿಯವರೆಗೂ ಇದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿತ್ತಾರೆ.

ಇನ್ನಾದರೂ ಆಡಳಿತ ವ್ಯವಸ್ಥೆ ಗಮನಹರಿಸಬೇಕಾಗಿದೆ. ಮಕ್ಕಳು, ನಾಗರೀಕರು ಬೀದಿಗಿಳಿದು ಪ್ರತಿಭಟನೆ ನಡೆಸುವುದಕ್ಕೂ ಮುನ್ನ ಶಾಲಾ ಮಕ್ಕಳ ಸುರಕ್ಷತೆಗೆ ಅಗತ್ಯವಾದ ಎಲ್ಲ ರೀತಿಯ ಕ್ರಮಕೈಗೊಳ್ಳಲಿದೆಯೇ ಎಂಬುವುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.

*** ಶಿವಮೊಗ್ಗ ನಗರದ ಗಾಡಿಕೊಪ್ಪದ ಸರ್ಕಾರಿ ಶಾಲಾ ಮಕ್ಕಳು, ಜೀವ ಕೈಯಲ್ಲಿಡಿದು ರಾಷ್ಟ್ರೀಯ ಹೆದ್ದಾರಿ ದಾಟುವಂತಹ ದುಃಸ್ಥಿತಿಯಿದ್ದರೂ ಸಂಬಂಧಿಸಿದ ಇಲಾಖೆಗಳು ಮಕ್ಕಳ ನೆರವಿಗೆ ಧಾವಿಸುವ ಕಾರ್ಯ ನಡೆಸಿಲ್ಲ. ಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚನ್ನಬಸಪ್ಪ ಅವರು ಆದ್ಯ ಗಮನಹರಿಸಬೇಕು. ಮಕ್ಕಳಿಗೆ ಸುರಕ್ಷತೆಗೆ ಅಗತ್ಯವಾದ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ನಾಗರೀಕರು ಆಗ್ರಹಿಸುತ್ತಾರೆ.

The national hero, who has passed through Gadikoppa of Shimoga city, has become a thorn in the side of students of local government schools! Many students have already been injured in accidents while going to school and home after crossing Hedhari. Despite all this, the administration has not taken any minimal measures regarding the safety of the students till now.

The attack of wild elephants continued in different parts of Shimoga taluk! ಶಿವಮೊಗ್ಗ ತಾಲೂಕಿನ ವಿವಿಧೆಡೆ ಮುಂದುವರಿದ ಕಾಡಾನೆಗಳ ದಾಳಿ! Previous post shimoga | ಶಿವಮೊಗ್ಗ ತಾಲೂಕಿನ ವಿವಿಧೆಡೆ ಮುಂದುವರಿದ ಕಾಡಾನೆಗಳ ದಾಳಿ!
Shimoga: Hundreds of banana and groundnut plants have been destroyed due to the attack of elephants! ಶಿವಮೊಗ್ಗ : ಆನೆಗಳ ದಾಳಿಗೆ ನೂರಾರು ಬಾಳೆ, ಅಡಕೆ ಗಿಡಗಳು ನಾಶ! Next post shimoga | ಶಿವಮೊಗ್ಗ : ಕಾಡಾನೆಗಳ ದಾಳಿಗೆ ನೂರಾರು ಬಾಳೆ, ಅಡಕೆ ಗಿಡಗಳು ನಾಶ!