A young man from Sagar who was selling ganja in Soraba was arrested! ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ!

soraba news | ಸೊರಬದಲ್ಲಿ ಗಾಂಜಾ ಮಾರುತ್ತಿದ್ದ ಸಾಗರದ ಯುವಕ ಅರೆಸ್ಟ್!

ಸೊರಬ (soraba), ನ. 7: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ, ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸೊರಬ ಪಟ್ಟಣದ ಹಿರೇಶಕುನದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನ. 6 ರಂದು ನಡೆದಿದೆ.

ಸಾಗರ ಪಟ್ಟಣದ ನಿವಾಸಿ ಮನೀಶ್ ಖಾರ್ವಿ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ 10 ಸಾವಿರ ರೂ. ಮೌಲ್ಯದ 100 ಗ್ರಾಂ ತೂಕದ ಒಣ ಗಾಂಜಾ, 600 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸೊರಬ ಸರ್ಕಲ್ ಇನ್ಸ್’ಪೆಕ್ಟರ್ ರಾಜಶೇಖರ್ ಮೇಲ್ವಿಚಾರಣೆಯಲ್ಲಿ ಸಬ್ ಇನ್ಸ್’ಪೆಕ್ಟರ್ ಚಂದನ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದೆ. ಆರೋಪಿ ವಿರುದ್ದ ಸೊರಬ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

The incident took place on November 6 in the industrial area of ​​Soraba town where the police arrested a young man on the charge of selling ganja.

Shivamogga Municipal Corporation Shelter Department Officer Caught in Lokayukta Trap! ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಅಧಿಕಾರಿ ಲೋಕಾಯುಕ್ತ ಬಲೆಗೆ! Previous post shimoga | ಶಿವಮೊಗ್ಗ : 25 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಆಡಳಿತ ಅಧಿಕಾರಿ!
Shimoga Assembly Constituency Electoral Roll Special Revision : Name Verification - Allowance for Amendment ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಹೆಸರು ಪರಿಶೀಲನೆ - ತಿದ್ದುಪಡಿಗೆ ಅವಕಾಶ Next post shimoga | ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಹೆಸರು ಪರಿಶೀಲನೆ – ತಿದ್ದುಪಡಿಗೆ ಅವಕಾಶ