ಯುಯುಸಿಎಂಎಸ್ ಕುರಿತ ಗೊಂದಲಕ್ಕೆ ಕುವೆಂಪು ವಿವಿ ಸ್ಪಷ್ಟೀಕರಣ

ಶಿವಮೊಗ್ಗ, ಮಾ. 14: ಇಂದಿನ ಕೆಲವು ಪತ್ರಿಕೆಗಳಲ್ಲಿ ಯುಯುಸಿಎಂಸ್ ಮೂಲಕ ನೀಡಿದ ಫಲಿತಾಂಶ ಕುರಿತಾಗಿ ಪ್ರಟಕವಾದ ವರದಿಗಳು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿರುವ ವರದಿಗಳು ಬಂದಿವೆ. ಎಲ್ಲ ವಿಶ್ವವಿದ್ಯಾಲಯಗಳಂತೆಯೇ ಕುವೆಂಪು ವಿವಿಯು ಸಹ ಯುಯುಸಿಎಂಎಸ್ (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಮೂಲಕ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಕೆಲವು ವಿಷಯಗಳಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ವಿವಿಯು ಸ್ಪಷ್ಟೀಕರಣ ನೀಡಿದೆ.

ಪ್ರಥಮ ಸೆಮಿಸ್ಟರ್‌ಗೆ ಸಂಬಂಧಿಸಿದ Digital Fluency, Financial Accounting ಮತ್ತು Fundamentals of Business Accounting ವಿಷಯಗಳಲ್ಲಿ ಅನುತ್ತೀರ್ಣರಾದಂತಹ ವಿದ್ಯಾರ್ಥಿಗಳು ಪ್ರಸ್ತುತ ನಡೆಯುತ್ತಿರುವ ಪರೀಕ್ಷೆಗಳನ್ನು ತೆಗೆದುಕೊಳ್ಳದೆ ಇರಲು ಸೂಚಿಸಲು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಲಾಗಿದೆ. 

UUCMSನಲ್ಲಿ ಫಲಿತಾಂಶ ಪ್ರಕಟಿಸುವ ಪ್ರಕ್ರಿಯೆಯಲ್ಲಿನ ದೋಷಗಳನ್ನು ಸರಿಪಡಿಸಿದ ನಂತರದಲ್ಲಿ ಮೇಲಿನ ವಿಷಯಗಳಲ್ಲಿ ಅನುತ್ತೀರ್ಣರಾದಂತಹ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುತ್ತದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್. ಕೆ. ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕುವೆಂಪು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ತಿಳಿಸಲು ಸುತ್ತೋಲೆ ಹೊರಡಿಸಿದ್ದರೂ ಸಹ ಪ್ರಾಂಶುಪಾಲರು ವಿಷಯ ಕಡೆಗಣಿಸಿದ್ದು, ಗೊಂದಲ ಸೃಷ್ಟಿಯಾದ ಕುರಿತು ವಿಶ್ವವಿದ್ಯಾಲಯ ವಿಷಾದ ವ್ಯಕ್ತಪಡಿಸಿದೆ ಹಾಗೂ ಮುಂದಿನ ದಿನಗಳಲ್ಲಿ ಈ ವ್ಯವಸ್ಥೆಯನ್ನು ಇನ್ನಷ್ಟು ದಕ್ಷವಾಗಿ ಅಳವಡಿಸಿಕೊಂಡು ಬಳಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *