Naxal leader Vikrangowda killed in encounter: What did the CM say? ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್’ಗೆ ಬಲಿ : ಸಿಎಂ ಹೇಳಿದ್ದೇನು?

naxal encounter | ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್’ಗೆ ಬಲಿ : ಸಿಎಂ ಹೇಳಿದ್ದೇನು?

ಬೆಂಗಳೂರು (bengaluru), ನ. 20: ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿಯಾದ ನಕ್ಸಲ್ ನಾಯಕ ವಿಕ್ರಂಗೌಡ ಪ್ರಕರಣದ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ’ ಎಂದು ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ  ಅವರು ಎನ್ ಕೌಂಟರ್ ನಲ್ಲಿ  ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,

ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ  ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.

ಸಚಿವರಿಗೆ ಮನವಿ : ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು,  ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ.

ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ, ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

CM Siddaramaiah has commented on the case of Naxal leader Vikrangowda, who was killed in a police encounter. He was wanted by the police in many cases and was ordered to surrender. But he did not surrender.

Karkala: Naxal leader Vikram Gowda was killed in a police encounter! ಕಾರ್ಕಳ : ನಕ್ಸಲ್ ನಾಯಕ ವಿಕ್ರಂ ಗೌಡ ಪೊಲೀಸ್ ಎನ್ ಕೌಂಟರ್ ಗೆ ಬಲಿ! Previous post naxal encounter | ಕಾರ್ಕಳ : ನಕ್ಸಲ್ ನಾಯಕ ವಿಕ್ರಂ ಗೌಡ ಪೊಲೀಸ್ ಎನ್ ಕೌಂಟರ್ ಗೆ ಬಲಿ!
shimoga | Shimoga: On 23rd of by-elections will be held holiday announcement for schools! ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ Next post shimoga | ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ!