shimoga | ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ!

shimoga | Shimoga: On 23rd of by-elections will be held holiday announcement for schools! ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ (shivamogga), ನ. 20: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ, ನವೆಂಬರ್ 23 ರಂದು ಉಪ ಚುನಾವಣೆ ನಿಗದಿಯಾಗಿದೆ.

ಚುನಾವಣಾ ಕ್ಷೇತ್ರಗಳಲ್ಲಿನ ಮತದಾನ ಕೇಂದ್ರಗಳು ಬಹುತೇಕ ಶಾಲೆಗಳಾಗಿವೆ. ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸುವುದರಿಂದ, ಜನದಟ್ಟಣೆಯಾಗಿ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತದಾನ ಕೇಂದ್ರವಿರುವ ಶಾಲೆಗಳಿಗೆ ನ. 23 ರ ಶನಿವಾರದಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿ ಶಾಲೆ ಮತ್ತು ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ, ಭದ್ರಾವತಿ ತಾಲೂಕಿನ ಬಾರಂದೂರು ಸ. ಹಿ.ಪ್ರಾ. ಶಾಲೆ (ಉತ್ತರಭಾಗ), ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿ ಸ.ಹಿ.ಪ್ರಾ. ಶಾಲೆ.

ಶಿಕಾರಿಪುರ ತಾಲೂಕಿನ ತರಲಘಟ್ಟ ಸ.ಹಿ.ಪ್ರಾ. ಶಾಲೆ, ಶಿಕಾರಿಪುರದ ಸರ್ಕಾರಿ ಉರ್ದು ಹಿ.ಪ್ರಾ. ಶಾಲೆ ಖಾಜಿ ಮೊಹಲ್ಲ ಹಾಗೂ ಶಿರಾಳಕೊಪ್ಪದ ಸ.ಉರ್ದು ಹಿ.ಪ್ರಾ.ಶಾಲೆ ಆಜಾದ್ ವೃತ್ತ, ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ. ಶಾಲೆ ಕೊ.ಸಂ.1 ರ ಶಾಲೆಗಳಲ್ಲಿ ನ.23 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದ್ದಾರೆ.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →