bhadra dam | ನ. 26 ರಿಂದ ಭದ್ರಾ ಜಲಾಶಯದಿಂದ ಬಲ – ಎಡದಂಡೆ ನಾಲೆಗಳಿಗೆ ನೀರು ಪೂರೈಕೆ ಸ್ಥಗಿತ!

Shivamogga, Jul. 22: Water will be released from the main canal of the Bhadra Upper River Project under the Visvesvaraya Jal Nigam Limited to Vani Vilas Sagar from 27-07-2025 as per the government's directive, the announcement said.

ಶಿವಮೊಗ್ಗ (shivamogga), ನ. 21: ಮುಂಗಾರು ಹಂಗಾಮಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಬಿಡುಗಡೆ ಮಾಡುತ್ತಿದ್ದ ನೀರು ಪೂರೈಕೆಯನ್ನು, ನವೆಂಬರ್ 26 ರ ರಾತ್ರಿಯಿಂದ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಮಾಹಿತಿ ಬಿಡುಗಡೆ ಮಾಡಿದ್ದಾರೆ. ನೀರಾವರಿ ಸಲಹಾ ಸಮಿತಿ ಸಭೆ ತೀರ್ಮಾನದಂತೆ, 29-07-2024 ರಿಂದ ಭದ್ರಾ ಡ್ಯಾಂನಿಂದ ಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಕ್ಕೆ 2024 – 25 ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸಲಾಗುತ್ತಿತ್ತು.

ನೀರು ಹರಿಸುವ ಗರಿಷ್ಠ ಅವಧಿ 120 ದಿನ ನಿಗದಿಗೊಳಸಲಾಗಿತ್ತು. ಅದರಂತೆ ಸದರಿ ಅವಧಿ 26-11-2024 ಕ್ಕೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 26-11-2024 ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತಿದೆ.

ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ನ. 21 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

The supply of water released from Bhadra reservoir to right and left bank canals has been suspended from the night of November 26.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →