
shimoga power cut news | ಶಿವಮೊಗ್ಗ ನಗರ – ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ?
ಶಿವಮೊಗ್ಗ (shivamogga), ನ. 21: ಶಿವಮೊಗ್ಗ ನಗರ ಉಪ ವಿಭಾಗ – 2 ರ ವ್ಯಾಪ್ತಿಯ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ನ. 23 ರಂದು ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ನ. 23 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸೀಗೆಹಟ್ಟಿ, ರವಿವರ್ಮ ಬೀದಿ, ಕೆಂಚರಾಯನ ಬೀದಿ, ಟಿ.ಎಸ್.ಆರ್.ರಸ್ತೆ, ಆಜಾದ್‌ನಗರ 1 ರಿಂದ 4 ನೇ ತಿರುವು, ಬಿ.ಬಿ.ರಸ್ತೆ, ಓ.ಟಿ.ರಸ್ತೆ,
ಕುಂಬಾರ ಬೀದಿ, ನಾಗಭೂಷಣ ಪ್ರೆಟ್ರೋಲ್ ಬಂಕ್, ನ್ಯೂಮಂಡ್ಲಿ, ಮಂಡ್ಲಿ ಬೈಪಾಸ್, ಶಿವಶಂಕರ ರೈಸ್‌ಮಿಲ್, ಮುರಾದ್ ನಗರ, ಇಮಾಮ್ ಬಾಡ, ಜಿ.ಎಸ್.ಕೆ.ಎಂ.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
: Quarterly emergency maintenance work was carried out on November 23 at Mandli Power Distribution Center under Shimoga Nagar Sub Division – 2.
ಹೊಳಲೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್ ಕಟ್
ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ, ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನ. 23 ಮತ್ತು 24 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ. ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ
Mescom said that the work of creating a link line route is being taken up in the lines supplied from the 66/11 KV power distribution center of Holalur village in Shimoga taluk.