ಶಿವಮೊಗ್ಗ (shivamogga), ನ. 21: ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ವಿಜೇತ ಪತ್ರಿಕಾ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಛಾಯಾಗ್ರಾಹಣ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ಬೀರಲಿಂಗೇಶ್ವರ ದೇವಸ್ಥಾನ ಸಮಿತಿ ಮತ್ತು ಹಾಲುಮತ ಮಹಾಸಭಾದ ವತಿಯಿಂದ ಬೀರಪ್ಪ ದೇವರ ಭಂಡಾರ ಜಾತ್ರೆಯ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು,
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಎಚ್. ಫಾಲಾಕ್ಷಿ, ಮಾಲತೇಶ್,
ಹಾಗೂ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಅಧ್ಯಕ್ಷರಾದ ರಾಮಕೃಷ್ಣ ಮೂಡ್ಲಿ, ಹಾಲುಮತ ಮಹಾಸಭಾದ ಗಣೇಶ ಬಿಳಿಗಿ, ಡಾ. ಪ್ರಶಾಂತ್, ಸಿದ್ದಪ್ಪ, ಹೊನ್ನಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

