
election result | ವಿಧಾನಸಭೆ ಉಪ ಚುನಾವಣೆ : ಚನ್ನಪಟ್ಟಣ, ಸಂಡೂರು, ಶಿಗ್ಗಾವಿಯಲ್ಲಿ ಕಾಂಗ್ರೆಸ್ ಮುನ್ನಡೆ!
ಬೆಂಗಳೂರು, ನ. 23: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸುಗೊಂಡಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ!
ಸಾಕಷ್ಟು ಗಮನ ಸೆಳೆದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದೆ. ಇತ್ತೀಚೆಗಿನ ಮಾಹಿತಿ ಪ್ರಕಾರ, ಸಿ ಪಿ ಯೋಗೇಶ್ವರ್ ಅವರು 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ಧಾರೆ.
ಸಂಡೂರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು ಕೂಡ ಮತ ಗಳಿಕೆಯಲ್ಲಿ ಸಾಕಷ್ಟು ಪೈಪೋಟಿ ನೀಡುತ್ತಿದ್ದಾರೆ. ಇತ್ತೀಚೆಗಿನ ಮಾಹಿತಿ ಅನುಸಾರ, ಕಾಂಗ್ರೆಸ್ ಅಭ್ಯರ್ಥಿಯು 7 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಶಿಗ್ಗಾವಿಯಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರ್ ಪಠಾಣ್ ಮುನ್ನಡೆ ಕಾಯ್ದುಕೊಂಡಿದ್ಧಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಕೊಂಚ ಹಿನ್ನಡೆಯಾಗಿದೆ. ಇತ್ತೀಚೆಗಿನ ಮಾಹಿತಿ ಅನುಸಾರ, ಕಾಂಗ್ರೆಸ್ ಅಭ್ಯರ್ಥಿಯು 3 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
The counting of votes for the by-elections held for the three assembly constituencies of the state is in full swing. Congress candidates have maintained their lead in Channapatna, Sandur and Shiggavi!