
shimoga | ಶಿವಮೊಗ್ಗ : ನೂತನ ತಹಶೀಲ್ದಾರ್ ವಿ. ಎಸ್. ರಾಜೀವ್ ಹೇಳಿದ್ದೇನು?
ಶಿವಮೊಗ್ಗ (shivamogga), ನ. 28: ‘ಕಾಲಮಿತಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು. ಅಹವಾಲು ಹೇಳಿಕೊಂಡು ಕಚೇರಿಗೆ ಆಗಮಿಸುವ ನಾಗರೀಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ತ್ವರಿತಗತಿಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ, ಕಚೇರಿ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಶಿವಮೊಗ್ಗ ತಾಲೂಕಿನ ನೂತನ ತಹಶೀಲ್ದಾರ್ ವಿ ಎಸ್ ರಾಜೀವ್ ತಿಳಿಸಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ನ. 28 ರ ಬುಧವಾರ, ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಈಗಾಗಲೇ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿ – ಸಿಬ್ಬಂದಿಗಳ ಸಭೆ ನಡೆಸಿ ಚರ್ಚಿಸಲಾಗಿದೆ. ಜೊತೆಗೆ ತಾವು ಕೂಡ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೆನೆ’ ಎಂದು ಹೇಳಿದ್ದಾರೆ.
ಯಾವುದೇ ಗೊಂದಲ – ಗಡಿಬಿಡಿಗೆ ಆಸ್ಪದವಾಗದಂತೆ ಕರ್ತವ್ಯ ನಿರ್ವಹಣೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಕರ್ತವ್ಯದ ಅವಧಿಯಲ್ಲಿ ನಾಗರೀಕರು ತಮ್ಮನ್ನು ಖುದ್ದಾಗಿ ಭೇಟಿಯಾಗಿ ಅಹವಾಲು ತೋಡಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಬೇಸಿಗೆ ವೇಳೆ ತಾಲೂಕಿನ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ತಾಲೂಕು ಪಂಚಾಯ್ತಿ ಇಓ ಅವರೊಂದಿಗೆ ಸಮಾಲೋಚಿಸಿ, ಅಗತ್ಯ ಪೂರ್ವಭಾವಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ತಾಲೂಕು ಆಡಳಿತದಿಂದ ನಾಗರೀಕರಿಗೆ ಉತ್ತಮ ಸೇವೆ ಲಭ್ಯವಾಗಬೇಕು. ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪಿಸುವುದು ಸೇರಿದಂತೆ, ಆಡಳಿತವನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ವಿ ಎಸ್ ರಾಜೀವ್ ಅವರು ತಿಳಿಸಿದ್ದಾರೆ.
Files should be disposed of within the time limit. Citizens who come to the office with complaints should be treated with courtesy. The new Tehsildar of Shimoga taluk VS Rajeev said that the office staff has been instructed to take action to solve the problems at the earliest.